ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣ: ವರದಿ ಕೇಳಿದ ರಾಜ್ಯ ಸರಕಾರ

ಮಂಗಳೂರು, ಜ.24: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೂಡಲೇ ವರದಿ ಸಲ್ಲಿಸುವಂತೆ ರಾಜ್ಯ ಸರಕಾರ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯಕ್ಕೆ ಸೂಚನೆ ನೀಡಿದೆ.

ಶುಕ್ರವಾರ ಮಧ್ಯಾಹ್ನದ ಒಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ವರದಿಯನ್ನು ಕೇಂದ್ರ ಗೃಹ ಇಲಾಖೆಗೆ ರಾಜ್ಯ ಸರ್ಕಾರ ಕಳುಹಿಸಲಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬಿಟ್ಟ ಘಟನೆಗೆ ಸಂಬಂಧಪಟ್ಟಂತೆ ಹಲವಾರು ಊಹಾಪೋಹಗಳು ಎದ್ದಿದ್ದವು. ಈಗ ಪ್ರಕರಣ ತಿರುವು ಪಡೆದುಕೊಂಡಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಧ್ಯಂತರ ವರದಿ  ಕೇಳಿದೆ ಎಂದು ತಿಳಿದುಬಂದಿದೆ.

Also Read  ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ಅಪಾಯದಿಂದ ಪಾರು

error: Content is protected !!
Scroll to Top