ಗಣರಾಜ್ಯೋತ್ಸವ – ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.24   ಜನವರಿ 26 ರಂದು ನೆಹರೂ ಮೈದಾನದಲ್ಲಿ ನಡೆಯಲಿರುವ 71ನೇ ಗಣರಾಜ್ಯೋತ್ಸವ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ವಿವಿಧ ಸಮಿತಿಗಳ ಮುಖ್ಯಸ್ಥರಿಗೆ ನಿಗದಿಪಡಿಸಿದ ಹೊಣೆಯನ್ನು ಪರಸ್ಪರ ಸಮನ್ವಯದಿಂದ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಎಲ್ಲಾ ಇಲಾಖೆಗಳ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಭಾಗಿಯಾಗಬೇಕೆಂದು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಹೇಳಿದರು. ನೆಹರೂ ಮೈದಾನ ಸಜ್ಜುಗೊಳಿಸುವಿಕೆ, ಮೈದಾನದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಉಪಹಾರ ವ್ಯವಸ್ಥೆ, ಪರೇಡ್ ರಿಹರ್ಸಲ್, ಸಾಂಸ್ಕೃತಿಕ ಇಲಾಖೆಯಿಂದ ನೃತ್ಯ ಪ್ರದರ್ಶನ, ಆರ್.ಟಿ.ಓ. ಇಲಾಖೆಯಿಂದ ಬಸ್ ವ್ಯವಸ್ಥೆ ಕಲ್ಪಿಸುವ ಬಗ್ಗೆ ಸಂಭಂಧಿಸಿದ ಅಧಿಕಾರಿಗಳು ಕ್ರಮವಹಿಸಲು ಸೂಚಿಸಿದರು. ಸಭೆಯಲ್ಲಿ ಜಿಲ್ಲಾ  ಪೊಲೀಸ್  ಅಧೀಕ್ಷಕ ಲಕ್ಷ್ಮೀ ಪ್ರಸಾದ್, ಉಪ ಆಯುಕ್ತ ಮದನ್ ಮೋಹನ್  ಹಾಗೂ ಇನ್ನಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Also Read  ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ► ಶಿವಮೊಗ್ಗ ಜಿ.ಪಂ.ಸದಸ್ಯ ಮಂಜುನಾಥ ನಾಯ್ಕ್‌ ಭೇಟಿ

error: Content is protected !!
Scroll to Top