ಜ.25 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.24   ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ‘ಮಗಳನ್ನು ಉಳಿಸಿ, ಮಗಳನ್ನು ಓದಿಸಿ’ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ನಾಳೆ ಬೆಳಿಗ್ಗೆ 10.30 ಗಂಟೆಗೆ ದ.ಕ ಜಿಲ್ಲಾ ಪಂಚಾಯತ್  ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಶಾಸಕ ಡಿ. ವೇದವ್ಯಾಸ್ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

Scroll to Top