ನಾಳೆ ರಾಷ್ಟ್ರೀಯ ಮತದಾರರ ದಿನಾಚರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.24     ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಹಯೋಗದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ  ಜನವರಿ 25 ರಂದು ಬೆಳಿಗ್ಗೆ 10 ಗಂಟೆಗೆ ಕುದ್ಮುಲ್ ರಂಗರಾವ್ ಪುರಭವನ, ಮಂಗಳೂರು ಇಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು  ಪ್ರಧಾನ ಜಿಲ್ಲಾ  ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ಇದರ ಅಧ್ಯಕ್ಷರು, ಕಡ್ಲೂರು ಸತ್ಯ ನಾರಾಯಣಾಚಾರ್ಯ ಉದ್ಘಾಟಿಸಲಿದ್ದಾರೆ.  ದ.ಕ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ ಹರ್ಷ ಮತದಾರರ ಪ್ರತಿಜ್ಞಾ ವಿಧಿ ಬೋಧನೆ ಮಾಡಲಿದ್ದಾರೆ.

Also Read  ತುಳುನಾಡಿನ ಚರಿತ್ರೆಗೆ ದೊರೆತ ಮಹತ್ವದ ಮನ್ನಣೆ ➤ ಪಠ್ಯಪುಸ್ತಕವಾಗಲಿದೆ ತುಳುನಾಡಿನ ಚರಿತ್ರೆ

error: Content is protected !!
Scroll to Top