ಮರ್ಧಾಳ: ‘ಹೊಟೇಲ್ ಸಾಂತಪ್ಪ’ ವಿಷ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜ.25. ಕಳೆದ ಕೆಲವು ದಶಕಗಳಿಂದ ಕಡಬ ತಾಲೂಕಿನ ಮರ್ಧಾಳದಲ್ಲಿ ಹೊಟೇಲ್ ಉದ್ಯಮವನ್ನು ನಡೆಸುತ್ತಿದ್ದ ಸಾಂತಪ್ಪ ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ತಡರಾತ್ರಿ ಬೆಳಕಿಗೆ ಬಂದಿದೆ.

ಹೊಟೇಲ್ ಸಾಂತಪ್ಪ ಎಂದೇ ಚಿರಪರಿಚಿತರಾಗಿದ್ದ ಸಾಂತಪ್ಪರವರು ಶುಕ್ರವಾರ ಸಂಜೆ ವೇಳೆಗೆ ಐತ್ತೂರು ಗ್ರಾಮದ ಭ್ರಾಂತಿಕಟ್ಟೆ ಎಂಬಲ್ಲಿ ಅರಣ್ಯ ಇಲಾಖೆಯ ಜಮೀನಿನಲ್ಲಿ ವಿಷ ಸೇವಿಸಿದ್ದಾರೆ ಎನ್ನಲಾಗಿದೆ. ತಡರಾತ್ರಿ ವೇಳೆ ಮೃತದೇಹವು ಕಂಡುಬಂದಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Also Read  ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಗೆ ಅಡ್ಡಿಪಡಿಸಿದ ಪ್ರಕರಣ ➤ ಕಾರು ಚಾಲಕನ ಬಂಧನ..!

error: Content is protected !!
Scroll to Top