ರಾಜನಾಥ್ ಸಿಂಗ್ ಮಂಗಳೂರಿಗೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.25  ಮಂಗಳೂರು ಕೇಂದ್ರ ಸಚಿವ ರಾಜನಾಥ್ ಸಿಂಗ್ ಜನವರಿ 27ರಂದು ಮಂಗಳೂರು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಬೆಂಬಲಿಸಿ ನಡೆಯಲಿರುವ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು  ಆಗಮಿಸಲಿದ್ದಾರೆ. ಪೌರತ್ವ ಕಾಯಿದೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಈ ಕಾರ್ಯಕ್ರಮದಲ್ಲಿ  ಲಕ್ಷಾಂತರ ಜನರು  ಭಾಗವಹಿಸುವ ನಿರೀಕ್ಷೆ ಇದೆ. ಇದೆ ಸಂಧರ್ಭದಲ್ಲಿ ನಗರದ ಬಸ್ ,ಟ್ಯಾಕ್ಸಿ, ಮತ್ತು ಆಟೋ ಚಾಲಕರ ಸಂಘದ ಸದಸ್ಯರು  ಬೆಂಬಲ ನೀಡಲಿದ್ದು, ವ್ಯಾಪಾರಸ್ತರು  ಸ್ವಯಂ ಪ್ರೇರಿತರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ  ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬೆಂಬಲ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳು ಸೇರಿದಂತೆ ಉಡುಪಿ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರದಿಂದ ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹಾಲದ ಜೋಶಿ, ರಾಜ್ಯ ಬಿಜೆಪಿ ಅದ್ಯಕ್ಷ ನಳಿನ್ ಕುಮಾರ್ ಕಟೀಲ್, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ,ಉತ್ತರ ಕನ್ನಡ ಸಂಸದ ಅನಂತ್ ಕುಮಾರ್, ಮೈಸೂರು ಸಂಸದ ಪ್ರತಾಪ ಸಿಂಹ ಮತ್ತು   ಕರಾವಳಿ ಭಾಗದ ಎಲ್ಲ ಶಾಸಕರು ಹಾಗೂ ರಾಜ್ಯ ಸರ್ಕಾರದ ಪ್ರಮುಖ ಸಚಿವರು ಬಾಗವಹಿಸಿಲಿದ್ದಾರೆ. ಪ್ರತಿಯೊಂದು ವಿಧಾನ ಸಭಾ ಕ್ಷೇತ್ರದ ಬೂತ್ ಮಟ್ಟದಿಂದ ಸ್ಥಳೀಯರೇ ಸಮಾವೇಶದಲ್ಲಿ ಭಾಗವಹಿಸಲು ವಾಹನದ ವ್ಯವಸ್ಥೆಯನ್ನು ಮಾಡಿಕೊಂಡಿದ್ದಾರೆ. ಸಮಾವೇಶದಲ್ಲಿ  ಭಾಗವಹಿಸಲು ಆಗಮಿಸುವ ಸಾರ್ವಜನಿಕರಿಗೆ ವಾಹನದ  ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸಂಚಾರದಲ್ಲಿ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಪೊಲೀಸ್ ಇಲಾಖೆಯು ಮಾರ್ಗ ಸೂಚಿಯನ್ನು ರಚಿಸಿದ್ದು ಈ ನಿಟ್ಟಿನಲ್ಲಿ ಪೊಲೀಸ್  ಇಲಾಖೆಯು ಸಂಪೂರ್ಣ  ಸಹಕಾರ ನೀಡಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಪೌರತ್ವ  ತಿದ್ದುಪಡಿ ಕಾಯಿದೆಯ ಕುರಿತು ಸಾರ್ವಜನಿಕರಿಗೆ ಏನಾದರೂ  ಗೊಂದಲಗಳಿದಲ್ಲಿ ಈ ಸಮಾವೇಶದಲ್ಲಿ ಪಾಲ್ಗೊಂಡು ಮಾಹಿತಿ ತಿಳಿಯಬಹುದಾಗಿದೆ ಎಂದು ದ.ಕ ಮತ್ತು  ಉಡುಪಿ ಜಿಲ್ಲೆಯ ಬಿಜೆಪಿ ಪಕ್ಷದ  ಸಂಘಟಕರ ಪ್ರಕಟಣೆ ತಿಳಿಸಿದೆ.
error: Content is protected !!
Scroll to Top