ಜ.27 ರಂದು ಚಲನಚಿತ್ರ ಪ್ರದರ್ಶನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.25    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸಹಯೋಗದಲ್ಲಿ ಜನವರಿ 27 ರಂದು ಗಣರಾಜ್ಯೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟ ಹಾಗೂ ಭಾರತದ ಸಂವಿಧಾನದ ನಿರ್ಮಾತೃರ ಮಹತ್ವ ತಿಳಿಸುವ ಚಲನಚಿತ್ರಗಳ ಪ್ರದರ್ಶನವನ್ನು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ.

ನಗರದ ವಿಶ್ವ ವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಜನವರಿ 27 ಸೋಮವಾರ ಬೆಳಿಗ್ಗೆ 10.30 ಗಂಟೆಗೆ  ರಿಚರ್ಡ್ ಅಟೆನ್‍ಬುರೋ ನಿರ್ದೆಶನದ ಗಾಂಧಿ ಹಾಗೂ ಜಬ್ಬಾರ್ ಪಟೇಲ್ ನಿರ್ದೇಶನದ ಡಾ.ಬಿ ಆರ್ ಅಂಬೇಡ್ಕರ್ ಚಲನಚಿತ್ರಗಳನ್ನು ಉಚಿತವಾಗಿ ಪ್ರದರ್ಶಿಸಲಾಗುತ್ತಿದೆ. ಜಿಲ್ಲೆಯ ಶಾಲಾ ಕಾಲೇಜು, ವಸತಿ ನಿಲಯಗಳ ವಿದ್ಯಾರ್ಥಿಗಳು, ಸಾಹಿತಿಗಳು, ಕಲಾವಿದರು, ಮಹಿಳೆಯರು, ಮಕ್ಕಳು, ಯುವಕರು ಹಾಗೂ ಹಿರಿಯರು ನಾಗರಿಕರು ಭಾಗವಹಿಸಬೇಕು ಎಂದು ಜಿಲ್ಲಾ ವಾರ್ತಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Also Read  ಪೊಲೀಸ್ ಕಾನ್ ಸ್ಟೆಬಲ್ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!

error: Content is protected !!
Scroll to Top