ಉಪ್ಪಿನಂಗಡಿ: ಗದ್ದೆಗೆ ಉರುಳಿದ ಆಟೋ ರಿಕ್ಷಾ ➤ ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.26. ಆಟೋರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗದ್ದೆಗೆ ಉರುಳಿ ಬಿದ್ದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಭಾನುವಾರದಂದು ಉಪ್ಪಿನಂಗಡಿಯಲ್ಲಿ ನಡೆದಿದೆ.

ಉಪ್ಪಿನಂಗಡಿ – ಕಡಬ ರಾಜ್ಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಪುಳಿತ್ತಡಿ ಎಂಬಲ್ಲಿ ಭಾನುವಾರ ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿದ ಆಪೆ ಆಟೋರಿಕ್ಷಾ ಹೆದ್ದಾರಿ ಪಕ್ಕದ ಗದ್ದೆಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!

Join the Group

Join WhatsApp Group