ಧಾರವಾಡದಲ್ಲಿ ಕಾರುಗಳ ಮುಖಾಮುಖಿ ಢಿಕ್ಕಿ: ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರು ಮೃತ್ಯು

ಧಾರವಾಡ, ಜ.27: ಎರಡು ಕಾರುಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕುಂದಗೊಳದ ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 4ರ ಯರಿಕೊಪ್ಪಬಳಿ ನಡೆದಿದೆ.
ಇಂಡಿಕಾ ಕಾರಿನಲ್ಲಿ ಹೊರಟಿದ್ದ ಸ್ವಾಮೀಜಿ ಕಾರಿನ ಮುಂಭಾಗದಲ್ಲಿ ಕುಳಿತಿದ್ದರು. ಅಪಘಾತದಲ್ಲಿ ಚಿಕ್ಕೊಡಿ ತಾಲೂಕಿನ ಕಬ್ಬೂರು ಗ್ರಾಮದ ಚಾಲಕ ಕೂಡಾ ಮೃತಪಟ್ಟಿದ್ದಾರೆ. ಕಾರಿನ ಹಿಂಬದಿ ಕುಳಿತಿದ್ದ ಬಸಪ್ಪಪೂಜಾರ, ಸಿದ್ದಪ್ಪ ಇಂಗಳಳ್ಳಿ, ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ ಸಂಬಂಧಿ ಸೋಮಣ್ಣ ದೇಸಾಯಿ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಿಎಂ ಗೆ ಮನವಿ

ಮತ್ತೊಂದು ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಮೃತಪಟ್ಟವರ ಹೆಸರು ತಿಳಿದು ಬಂದಿಲ್ಲ ಎಂಬುದಾಗಿ ಗ್ರಾಮೀಣ ಠಾಣಾ ಪೊಲೀಸರು ಹೇಳಿದ್ದಾರೆ. ಕಾರುಗಳನ್ನು ಕ್ರೇನ್ ಸಹಾಯದಿಂದ ಪಕ್ಕಕ್ಕೆ ಸರಿಸಿ, ಮೃತದೇಹ ಹೊರಕ್ಕೆ ತೆಗೆಯಲಾಯಿತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top