ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನ

 

ಮಂಗಳೂರು, ಜ.27: ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಅಮರನಾಥ ಶೆಟ್ಟಿ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಗ್ಗೆ ನಿಧನರಾದರು.

ಅವರಿಗೆ 81 ವರ್ಷ ವಯಸ್ಸಾಗಿತ್ತು. ಎರಡು ವಾರಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ದಾಖಲಿಸಿ ಸಚಿವರಾಗಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.

Scroll to Top