ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದ ಪಶ್ಚಿಮ ಬಂಗಾಳ ಸರಕಾರ

ಹೊಸದಿಲ್ಲಿ, ಜ.28: ಕೇಂದ್ರ ಸರಕಾರ ಜಾರಿಗೊಳಿಸಿದ ಪೌರತ್ವ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಿದ ಸಾಲಿಗೆ ಇದೀಗ ಪಶ್ಚಿಮ ಬಂಗಾಳ ರಾಜ್ಯ ಸಹ ಸೇರಿಕೊಂಡಿದೆ. ಕೇರಳ, ಪಂಜಾಬ್ ಮತ್ತು ರಾಜಸ್ಥಾನಗಳ ನಂತರ ಇದೀಗ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದೆ.

ಪೌರತ್ವ ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ನಡುವೆ ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು.

Also Read  ಶುಲ್ಕ ಪಾವತಿಸದ ಕಾರಣಕ್ಕೆ ಪರೀಕ್ಷೆಗೆ ನಿರ್ಬಂಧ   ➤  ಮನನೊಂದು ಪ್ರಾಣ ಬಿಟ್ಟ ವಿದ್ಯಾರ್ಥಿನಿ

ವಿಧಾನಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ನಾವು ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿಗಳಿಗೆ ಅನುಮತಿ ನೀಡುವುದಿಲ್ಲ. ಇವುಗಳ ವಿರುದ್ಧ ನಾವು ಶಾಂತಿಯುತವಾಗಿಯೇ ಹೋರಾಡತ್ತೇವೆ ಎಂದರು.

error: Content is protected !!
Scroll to Top