ಉತ್ತರಪ್ರದೇಶ, ಜ.28: ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿರುವ ಬಗ್ಗೆ ಶಂಕೆ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿ ಮತ್ತು ತಮ್ಮನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ನೌರಂಗಾಬಾದ್‌ನಲ್ಲಿ ನಡೆದಿದೆ.
ಕೊಲೆಯಾದವರನ್ನು ಶಬಿಕುನ್ನೀಶ (30) ಮತ್ತು ಮೊಹ್ಸಿನ್(30) ಎಂದು ಗುರುತಿಸಲಾಗಿದೆ. ಶಕೀಲ್ ಎಂಬಾತ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಬಿಡಿಸಲು ಬಂದ ತಾಯಿಗೂ ಸಹ ಶಕೀಲ್ ಹಲ್ಲೆ ಮಾಡಿದ್ದು, ಅವರು ಸಹ ಗಾಯಗೊಂಡಿದ್ದಾರೆ. ಇನ್ನು ಶಕೀಲ್ ಕೃತ್ಯ ಕಂಡ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.