ಆರ್ಯ ವೈಶ್ಯರಿಗೆ ಜಾತಿ ಪ್ರಮಾಣ ಪತ್ರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.29     ಆರ್ಯ ವೈಶ್ಯ ಜನಾಂಗದವರಿಗೆ ಈ ಹಿಂದೆ ಜಾತಿ ಪ್ರಮಾಣ ಪತ್ರವನ್ನು ವಿದ್ಯಾಭ್ಯಾಸದ ಸಲುವಾಗಿ 18 ವರ್ಷ ಒಳಪಟ್ಟವರಿಗೆ ಮಾತ್ರ ನೀಡಲಾಗುತ್ತಿತ್ತು. ರಾಜ್ಯ ಸರಕಾರವು ಇನ್ನು ಮುಂದೆ ಆರ್ಯ ವೈಶ್ಯ ಜನಾಂಗದವರಿಗೆ ಶಾಲಾ ಪ್ರವೇಶಕ್ಕೆ ಮಾತ್ರವಲ್ಲದೆ ಸರ್ಕಾರಿ ಸಂಸ್ಥೆಗಳಿಂದ ಸಾಲ, ಸಹಾಯಧನ ಮತ್ತು ತರಬೇತಿ ಪಡೆಯಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನಮೂನೆ-ಜಿ ಯಲ್ಲಿ ಪಡೆಯಲು ಆದೇಶಿಸಿದೆ.

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಮತ್ತು ಇತರೆ ಸರ್ಕಾರಿ ಸಂಸ್ಥೆಗಳಿಂದ ಸಾಲ ಸೌಲಭ್ಯಗಳನ್ನು ಪಡೆಯಲು ಜಾತಿ ಮತ್ತು ಆದಾಯ ಪತ್ರವು ಕಡ್ಡಾಯವಾಗಿರುತ್ತದೆ. ಆದ್ದರಿಂದ ಆರ್ಯ ವೈಶ್ಯ ಸಮುದಾಯದವರು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನಮೂನೆ-ಜಿ ಯಲ್ಲಿ ಪಡೆಯಲು ನಾಡಕಚೇರಿ ಕೇಂದ್ರ, ಮಂಗಳೂರು -1, ಕರ್ನಾಟಕ -1 ಹಾಗೂ ನಾಡಕಚೇರಿಯ ಅಂತರ್ಜಾಲದಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ- 0824-2456544 ಅಥವಾ ನಾಡಕಚೇರಿ ಸಹಾಯವಾಣಿ – 14005990044 ಸಂಪರ್ಕಿಸಲು ಜಿಲ್ಲಾ ವ್ಯವಸ್ಥಾಪಕರು ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ  ದ,ಕ ಜಿಲ್ಲೆ ಮಂಗಳೂರು ಇವರ ಪ್ರಕಟನೆ ತಿಳಿಸಿದೆ.

Also Read  ಅತ್ಯಾಚಾರ ಪ್ರಕರಣ- ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

error: Content is protected !!
Scroll to Top