ಉಪ್ಪಿನಂಗಡಿ: ರಿಕ್ಷಾ – ಕಾರು – ಬೈಕ್ ನಡುವೆ ಸರಣಿ ಅಪಘಾತ ➤ ಐವರು ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.29. ಕಾರು, ಬೈಕ್ ಹಾಗೂ ಆಟೋರಿಕ್ಷಾ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೆರಿಯಡ್ಕ ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.

ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ಫೋರ್ಡ್ ಕಾರು ಹಾಗೂ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಆಟೋರಿಕ್ಷಾ ಮತ್ತು ಬೈಕ್ ನಡುವೆ ಸರಣಿ ಅಪಘಾತವಾಗಿದೆ. ಘಟನೆಯಲ್ಲಿ ಮೂರೂ ವಾಹನಗಳು ಜಖಂಗೊಂಡಿದ್ದು, ಗಂಭೀರ ಗಾಯಗಿರುವ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top