ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಪ್ರೋತ್ಸಾಹ ಧನ ಸಹಾಯ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2019-20ನೇ ಸಾಲಿನ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಕನ್ನಡ  ಸಾಹಿತ್ಯ, ಸಂಗೀತ ನೃತ್ಯ, ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ , ಶಿಲ್ಪಕಲೆ, ಮುಂತಾದ ಸೃಜನಶೀಲ ಕಲಾ ಪ್ರಕಾರಗಳಲ್ಲಿ ನಿರಂತರ ಚಟುವಟಿಕೆಗಳನ್ನು ನಡೆಸುತ್ತಿರುವ ಅರ್ಹ ನೊಂದಾಯಿತ ಸಂಘ-ಸಂಸ್ಥೆಗಳಿಗೆ, ಅಸಂಘಟಿತ ಕಲಾವಿದರಿಗೆ ವಾದ್ಯಪರಿಕರ ಹಾಗೂ ವೇಷಭೂಷಣ ಖರೀದಿಗಾಗಿ ಮತ್ತು ಚಿತ್ರ/ಶಿಲ್ಪ ಕಲಾವಿದರ ಕಲಾಕೃತಿಗಳ ಪ್ರದರ್ಶನಕ್ಕೆ ಪ್ರೋತ್ಸಾಹ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

Also Read  ಕಂದಾಯ ಇಲಾಖೆಯ ಮಹಾಸಭೆ ಮತ್ತು ಅಭಿನಂದನಾ ಸಮಾರಂಭ


ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸುವ ದಿನವನ್ನು ಫೆಬ್ರವರಿ 4 ರವರೆಗೆ ವಿಸ್ತರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಗಳೂರು ಇವರ  ಪ್ರಕಟಣೆ ತಿಳಿಸಿದೆ.

error: Content is protected !!
Scroll to Top