(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30 ಅಪಘಾತಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯವಾದ ಕ್ರಮ ಕೈಗೊಂಡು ಅಪಘಾತ ಉಂಟಾಗದಂತೆ ಎಚ್ಚರಿಕೆ ವಹಿಸಿ ಎಂದು ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದನ್ನು ತಡೆಗಟ್ಟುವ ಸಲುವಾಗಿ ಅಧಿಕಾರಿಗಳು ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು, ಹಾಗೆಯೇ ರಸ್ತೆ ಸುರಕ್ಷತಾ ಕ್ರಮಕ್ಕೆ ಸಂಬಂಧಿಸಿದಂತೆ ಜಾಹೀರಾತುಗಳನ್ನು ಅಳವಡಿಸಿ ಎಂದು ಸೂಚಿಸಿದರು. ನಗರದಲ್ಲಿ ಕೆಲವೊಂದು ಭಾಗದಲ್ಲಿ ಸಿಗ್ನಲ್‍ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದಿರುವುದು ಕಂಡುಬಂದಿದೆ. ಅಂತಹ ಸಿಗ್ನಲ್‍ಗಳನ್ನು ಅದಷ್ಟು ಬೇಗನೆ ಕಾರ್ಯನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು, ಇದರ ಜೊತೆಗೆ ರಸ್ತೆಯ ಅಕ್ಕಪಕ್ಕದಲ್ಲಿ ಮಾಡಲಾಗಿರುವ ಪಾರ್ಕಿಂಗ್ ವ್ಯವಸ್ಥೆಯಿಂದ ವಾಹನ ಸವಾರರಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ಕ್ರಮವಹಿಸಬೇಕು. ರಸ್ತೆ ಸುರಕ್ಷತಾ ಬಗ್ಗೆ ಯಾವುದಾದರೂ ಕಾಮಗಾರಿ ಅನುಷ್ಟಾನಕ್ಕೆ ತರಲು ರಸ್ತೆ ಸುರಕ್ಷತಾ ಅಡ್ಡಿಯಲ್ಲಿ ಇರುವ ಮೀಸಲೂ ಅನುದಾನವನ್ನು ಬಳಕೆ ಮಾಡಿಕೊಳ್ಳವಂತೆ ಅಧಿಕಾರಿಗಳಿಗೆ ಸಭೆಯಲ್ಲಿ ಸಲಹೆಯನ್ನು ನೀಡಿದ್ದರು. ಸಭೆಯಲ್ಲಿ ಸಹಾಯಕ ಆಯುಕ್ತ ಮದನ್ ಮೋಹನ್, ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಇತರೆ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.