(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31 ದಕ್ಷಿಣ ಕನ್ನಡ ಜಿಲ್ಲೆಯ 2020ನೇ ಫೆಬ್ರವರಿ ಮಾಹೆಯಲ್ಲಿ ನಡೆಯುವ ಪರಿಷ್ಕೃತ ಉದರ ದರ್ಶಕ ಶಸ್ತ್ರಚಿಕಿತ್ಸೆ ವಿವರ ಇಂತಿವೆ:
ಫೆಬ್ರವರಿ 7 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, 10 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, 12 ರಂದು ಪುತ್ತೂರು ತಾಲೂಕಿನ ಸರಕಾರಿ ಆರೋಗ್ಯ ಕೇಂದ್ರ ಕಡಬ, 14 ರಂದು ತಾಲೂಕು ಆಸ್ಪತ್ರೆ ಬಂಟ್ವಾಳ, 15 ರಂದು ಸುಳ್ಯ ತಾಲೂಕಿನ ಸಾರ್ವಜನಿಕ ಆಸ್ಪತ್ರೆ ಸುಳ್ಯ, 17 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಉಳ್ಳಾಲ, 18 ರಂದು ತಾಲೂಕು ಆಸ್ಪತ್ರೆ ಬೆಳ್ತಂಗಡಿ, ಮತ್ತು ಬಂಟ್ವಾಳ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರ ವಿಟ್ಲ, ಮಾಣಿ, 19 ರಂದು ಪುತ್ತೂರು ತಾಲೂಕಿನ ಸಾರ್ವಜನಿಕ ಆಸ್ಪತ್ರೆ, 25 ರಂದು ಮಂಗಳೂರು ತಾಲೂಕು ಸರಕಾರಿ ಆರೋಗ್ಯ ಕೇಂದ್ರ ಮೂಡಬಿದ್ರೆಯಲ್ಲಿ ನಡೆಯಲಿದೆ.
ಶಿಬಿರದ ದಿನಗಳಂದು ಎನ್‍ಎಸ್‍ವಿ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ಫಲಾನುಭವಿಗಳಿದ್ದರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಗೆ ದೂರವಾಣಿ ಮೂಲಕ ತಿಳಿಸಬೇಕು, ನಂತರ ಎನ್‍ಎಸ್‍ವಿ ಶಸ್ತ್ರ ಚಿಕಿತ್ಸೆ ಮಾಡಿಸಲು ಫಲಾನುಭವಿಗಳನ್ನು ಕರೆಸಲಾಗುತ್ತದೆ. ಪ್ರತಿ ವಾರದ ಗುರುವಾರ ಮತ್ತು ಶುಕ್ರವಾರದಂದು ಲೇಡಿಗೋಷನ್ ಆಸ್ಪತ್ರೆಯಲ್ಲಿ ಉದರದರ್ಶಕ ಶಸ್ತ್ರ ಚಿಕಿತ್ಸೆ ಮತ್ತು ಪ್ರತಿ ದಿನ ಟ್ಯುಬೆಕ್ಟಮಿ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತದೆ. ಸಾರ್ವಜನಿಕರು ಶಿಬಿರದ ಸದುಪಯೋಗವನ್ನು ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.