ಫೆ.2 – ಮಡಿವಾಳ ಮಾಚಿದೇವ ಹಾಗೂ ಸವಿತಾ ಮಹರ್ಷಿ ಜಯಂತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ದ.ಕ ಜಿಲ್ಲಾ ಮಡಿವಾಳರ ಸಂಘ(ರಿ), ದ.ಕ ಜಿಲ್ಲಾ ಸವಿತಾ ಸಮಾಜ ಮಂಗಳೂರು ಇವರ ಸಹಕಾರದೊಂದಿಗೆ ಮಡಿವಾಳ ಮಾಚಿದೇವ ಹಾಗೂ ಸವಿತಾ ಮಹರ್ಷಿ ಜಯಂತಿ ಆಚರಣೆಯು  ಫೆಬ್ರವರಿ 2 ರಂದು ಬೆಳಿಗ್ಗೆ 10.30 ಗಂಟೆಗೆ ತುಳು ಭವನ, ಉರ್ವಸ್ಟೋರ್ ಇಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು  ಮುಜರಾಯಿ, ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವ ಮತ್ತು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

Scroll to Top