ಫೆ. 6 ರಂದು ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಫೆಬ್ರವರಿ 6 ರಂದು ಬೆಳಿಗ್ಗೆ  11.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುತ್ತದೆ. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲುಗಳು/ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ಮಂಗಳೂರು ಇವರಿಗೆ ಫೆಬ್ರವರಿ 4 ರೊಳಗೆ ಲಿಖಿತವಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0824- 2214021  ಸಂಪರ್ಕಿಸಬಹುದು ಎಂದು ಜಂಟಿನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಕೊರೊನಾ ವಾರಿಯರ್ಸ್‍ಗೆ ಪುಷ್ಪ ಪ್ರದರ್ಶನದ ಮೂಲಕ ಗೌರವ

error: Content is protected !!
Scroll to Top