ಕರಾವಳಿ ಉತ್ಸವ –ವಸ್ತುಪ್ರದರ್ಶನ ಫೆ. 23ರವರೆಗೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಫೆ. 5 ಕರಾವಳಿ ಉತ್ಸವದ ಅಂಗವಾಗಿ ನಡೆಯುತ್ತಿರುವ ವಸ್ತು ಪ್ರದರ್ಶನ ಫೆಬ್ರವರಿ 23ರವರೆಗೆ ನಡೆಯಲಿದೆ. ಮಂಗಳೂರಿನ ಮಂಗಳಾ ಸ್ಟೇಡಿಯಂ ಪಕ್ಕದ ಕರಾವಳಿ ಉತ್ಸವ ಮೈದಾನದಲ್ಲಿ ವಸ್ತುಪ್ರದರ್ಶನ ನಡೆಯುತ್ತಿದ್ದು, ವಿವಿಧ ರೀತಿಯ ವಸ್ತುಪ್ರದರ್ಶನ ಹಾಗೂ ಮಾರಾಟ ನಡೆಯುತ್ತಿದೆ. ಆಹಾರ ಉತ್ಪನ್ನಗಳು, ಗೃಹ ಬಳಕೆ ಸಾಮಾಗ್ರಿಗಳು, ಮಕ್ಕಳ ಆಟಿಕೆ ಸಾಮಾಗ್ರಿಗಳ ಮಾರಾಟ ಪ್ರದರ್ಶನ ನಡೆಯುತ್ತಿದೆ.

ಮನೋರಂಜನೆಗೆ ವಿವಿಧ ರೀತಿಯ ಅಮ್ಯೂಸ್ಮೆಂಟ್ಗಳು, ಮಕ್ಕಳ ಮನರಂಜನೆಯ ತಾಣಗಳು ಕರಾವಳಿ ಉತ್ಸವದಲ್ಲಿ ಆಕರ್ಷಿಸುತ್ತಿವೆ. ಈ ವರ್ಷ ಕರಾವಳಿ ಉತ್ಸವ ವಸ್ತುಪ್ರದರ್ಶನ ಆವರಣವನ್ನು ಜಿಲ್ಲಾಡಳಿತವೇ ನೇರವಾಗಿ ಸಿದ್ಧಪಡಿಸಿದ್ದು, ಎಲ್ಲಾ ರೀತಿಯ ಸೌಲಭ್ಯಗಳನ್ನು ಒಳಗೊಂಡಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ವಸ್ತುಪ್ರದರ್ಶನಕ್ಕೆ ಆಗಮಿಸಲು ಮಂಗಳೂರು ಮಹಾನಗರಪಾಲಿಕೆ ಪ್ರಕಟಣೆ ತಿಳಿಸಿದೆ.

Also Read  ಟ್ರ್ಯಾಕ್ಟರ್ ಹಾಗೂ ಕ್ರೂಸರ್ ಮಧ್ಯೆ ಮುಖಾಮುಖಿ ಡಿಕ್ಕಿ..!➤ಇಬ್ಬರು ಮೃತ್ಯು

 

error: Content is protected !!
Scroll to Top