(ನ್ಯೂಸ್ ಕಡಬ) newskadaba.com, ಮಂಗಳೂರು, ಫೆ.6. ದ.ಕ ಜಿಲ್ಲೆ ಉಳ್ಳಾಲದ ವೀರ ರಾಣಿ ಅಬ್ಬಕ್ಕ ಉತ್ಸವವನ್ನು 2020ರ ಫೆಬ್ರವರಿ ತಿಂಗಳಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದೆ. ಅಬ್ಬಕ್ಕ ಉತ್ಸವ ವೇದಿಕೆಗಳಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನೀಡಲು ಜಿಲ್ಲೆಯ ವಿವಿಧ ಕಲಾತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಕಲಾತಂಡಗಳು ಅರ್ಜಿ ಸಲ್ಲಿಸುವಾಗ ತಮ್ಮ ಕಲಾಪ್ರಕಾರ, ಈ ಹಿಂದೆ ನೀಡಿರುವ ಕಾರ್ಯಕ್ರಮಗಳ ಬಗ್ಗೆ ವಿವರ, ಛಾಯಾಚಿತ್ರಗಳು ಈ ಬಗ್ಗೆ ಪತ್ರಿಕಾ ವರದಿಗಳನ್ನೊಳಗೊಂಡ ದಾಖಲೆಗಳು ಮತ್ತು ನಿರೀಕ್ಷಿಸುವ ಸಂಭಾವನೆ ವಿವರಗಳೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ತುಳು ಭವನ, ಉರ್ವಸ್ಟೋರ್, ಮಂಗಳೂರು ಇವರಿಗೆ ಫೆಬ್ರವರಿ 10 ರೊಳಗೆ ಸಲ್ಲಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು ರಾಜ್ಯದ ಕಲೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಿರಬೇಕು. ಹಿಂದಿನ ವರ್ಷಗಳಲ್ಲಿ ಅಬ್ಬಕ್ಕ ಉತ್ಸವದಲ್ಲಿ ಕಾರ್ಯಕ್ರಮಗಳನ್ನು ನೀಡಿರುವ ತಂಡಗಳನ್ನು ಪರಿಗಣಿಸಲಾಗುವುದಿಲ್ಲ. ಸಾಂಸ್ಕೃತಿಕ ಸಮಿತಿಯಿಂದ ಆಯ್ಕೆಯಾದ ಕಲಾತಂಡಗಳಿಗೆ ಮಾತ್ರ ಆಯ್ಕೆ ಮತ್ತು ಕಾರ್ಯಕ್ರಮ ನೀಡುವ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.