ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಪುಟ್ಟ ಮಗು ➤ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯಲು ಸಿದ್ಧತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.06. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 40 ದಿನದ ಪುಟ್ಟ ಕಂದಮ್ಮನನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಕರೆದೊಯ್ಯಲು ಸಿದ್ಧತೆ ನಡೆದಿದೆ.

ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬುಲೆನ್ಸಿನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯುವ ಆಂಬ್ಯಲೆನ್ಸ್ ಕೆಲವೇ ಕ್ಷಣಗಳಲ್ಲಿ ಮಂಗಳೂರಿನಿಂದ ಹೊರಡಲಿದೆ. ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ, ನೆಲಮಂಗಲ ಮಾರ್ಗವಾಗಿ ಬೆಂಗಳೂರು ತಲುಪಲಿದೆ. ಝೀರೋ ಟ್ರಾಫಿಕ್ ವ್ಯವಸ್ಥೆಗೆ ರಾಜ್ಯ ಪೊಲೀಸ್ ಇಲಾಖೆಯು ಸಂಪೂರ್ಣ ಸಹಕಾರ ನೀಡಲಿದೆ.

Also Read  ನಿರುದ್ಯೋಗ ನಿವಾರಣೆಗೆ 'ವಿಂಗ್' ಸ್ಥಾಪನೆ, ಉದ್ಯೋಗ ಕಲ್ಪಿಸುವುದೇ ನನ್ನ ಮೊದಲ ಆದ್ಯತೆ: ಎಚ್ ಡಿಕೆ

error: Content is protected !!
Scroll to Top