ನಾಳೆಯಿಂದ ಅಜಿಲಮೊಗರು ಮಾಲಿದಾ ಉರೂಸ್

(ನ್ಯೂಸ್ ಕಡಬ) newskadaba.com, ಬಂಟ್ವಾಳ, ಫೆ.6. ಅಜಿಲಮೊಗರುವಿನಲ್ಲಿ ಅಂತ್ಯ ವಿಶ್ರಮ ಹೊಂದುತ್ತಿರುವ ಹಝ್ರತ್ ಸೈಯ್ಯಿದ್ ಬಾಬಾ ಫಕ್ರುದ್ದೀನ್ ಔಲಿಯಾ (ರ.ಅ) ಇವರ ಸವಿನೆನಪಿಗಾಗಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಇತಿಹಾಸ ಪ್ರಸಿದ್ಧವಾದ 747 ನೇ ಮಾಲಿದಾ ಉರೂಸ್ ನಾಳೆಯಿಂದ (ಫೆಬ್ರವರಿ) 7, 8, 9 ದಿನಾಂಕಗಳಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಹಲವಾರು ಪ್ರಮುಖ ಉಲಮಾಗಳು, ಸಾದಾತುಗಳು, ಸಾಮಾಜಿಕ ಹಾಗೂ ಧಾರ್ಮಿಕ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top