ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.06. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 40 ದಿನದ ಪುಟ್ಟ ಕಂದಮ್ಮನನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಐಸಿಯು ಆಂಬ್ಯುಲೆನ್ಸ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ರವಾನಿಸಲಾಯಿತು.

ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬ್ಯುಲೆನ್ಸಿನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ರಸ್ತೆ ಮಾರ್ಗವಾಗಿ ಕರೆದೊಯ್ಯಲಾಯಿತು. ಮಂಗಳೂರಿನಿಂದ ಹೊರಟ ಆಂಬ್ಯುಲೆನ್ಸ್ ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ, ನೆಲಮಂಗಲ ಮಾರ್ಗವಾಗಿ ಬೆಂಗಳೂರನ್ನು ತಲುಪಿತು. ಝೀರೋ ಟ್ರಾಫಿಕ್ ವ್ಯವಸ್ಥೆಗೆ ರಾಜ್ಯ ಪೊಲೀಸ್ ಇಲಾಖೆಯು ಸಂಪೂರ್ಣ ಸಹಕಾರ ನೀಡಿತು. ಅಲ್ಲದೆ ಕೆಲವು ಖಾಸಗಿ ಆಂಬ್ಯುಲೆನ್ಸ್ ಗಳು, ಎಸ್ಡಿಪಿಐನ ಆಂಬ್ಯುಲೆನ್ಸ್ ಜೊತೆಗಿದ್ದವು.

error: Content is protected !!
Scroll to Top