ಬೆಳ್ಳಾರೆ: ಡಾ| ಬಿ.ಎಂ ಶೆಟ್ಟಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com, ಸುಳ್ಯ. ಫೆ.7. ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ, ವೈದ್ಯ ಡಾ.ಬಿ.ಎಂ.ಶೆಟ್ಟಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವೈದ್ಯರಾಗಿ, ಪ್ರಗತಿಪರ ಕೃಷಿಕರಾಗಿ, ಧಾರ್ಮಿಕ ನೇತಾರರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದ ಬೆಳ್ಳಾರೆಯ ಡಾ.ಬಿ.ಎಂ. ಶೆಟ್ಟಿ ತಡಗಜೆ ಅವರು ದಾವಣಗೆರೆ ಜಿಲ್ಲೆಯ ಜಗಳೂರು ಎಂಬಲ್ಲಿ 25 ವರ್ಷ ವೈದ್ಯಕೀಯ ಸೇವೆ ಸಲ್ಲಿಸಿದ್ದರು. ಬಳಿಕ ಊರಿಗೆ ಹಿಂತಿರುಗಿ ಕೃಷಿ ಹಾಗೂ ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.

Also Read  ಕಡಬ: ತನ್ನ ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ

ಮೃತರು ಪತ್ನಿ, ನಾಲ್ವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಸಹೋದರಿ, ಸಹೋದರರನ್ನು ಅಗಲಿದ್ದಾರೆ.

error: Content is protected !!
Scroll to Top