ಸುಳ್ಯ: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು, ಸಹ ಸವಾರ ಗಂಭೀರ



(ನ್ಯೂಸ್ ಕಡಬ) newskadaba.com ಸುಳ್ಯ, ಫೆ.08. ಬೈಕ್ ಮತ್ತು ಬಸ್ ನಡುವೆ ಢಿಕ್ಕಿ ಉಂಟಾದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡು ಎಂಬಲ್ಲಿ ನಡೆದಿದೆ.





ಮೃತ ಸವಾರನನ್ನು ಜೋಡುಪಾಲ ಸಮೀಪದ ನಿವಾಸಿ ವಿನುತ್ ಎಂದು ಗುರುತಿಸಲಾಗಿದ್ದು, ಗಾಯಾಳುವನ್ನು ರಾಜಪ್ಪ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡ ರಾಜಪ್ಪರವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸುಳ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top