Breaking ಉಪ್ಪಿನಂಗಡಿ: ಕಾರು – ಟ್ಯಾಂಕರ್ ನಡುವೆ ಢಿಕ್ಕಿ ➤ ಒಂದೇ ಕುಟುಂಬದ ಇಬ್ಬರು ಮೃತ್ಯು, ಓರ್ವ ಗಂಭೀರ



(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.09. ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ನಡೆದಿದ್ದು ಇಬ್ಬರು ಮೃತಪಟ್ಟು ಒರ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬೆದ್ರೋಡಿ ಎಂಬಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.





ಮೃತರನ್ನು ನೆಲ್ಯಾಡಿಯ ಉದ್ಯಮಿ ಯು.ಪಿ ವರ್ಗೀಸ್ ಅವರ ಸೊಸೆ ಕಾಂಚನ ನಿವಾಸಿ ಶಾಜಿ ಎಂಬವರ ಪತ್ನಿ ಜೈನೀ ಶಾಜಿ (30) ಮತ್ತು ಅವರ ಸಹೋದರ ಜಿಸನ್ (40) ಎಂಬವರು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಸರ್ವೀನ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಸನ್ ಧರ್ಮಗುರುದೀಕ್ಷೆ ಪಡೆಯಲು ತರಬೇತಿಯಲ್ಲಿದ್ದು, ಭಾನುವಾರದಂದು ಕಾರಿನಲ್ಲಿ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಲ್ಲಿ ಬಂದ ಟ್ಯಾಂಕರ್ ಇವರಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೋಲೀಸರು ಹಾಗೂ ಪುತ್ತೂರು ಸಂಚಾರಿ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top