ಮಂಗಳೂರು: ಮೂವರು ಮದ್ರಸ ವಿದ್ಯಾರ್ಥಿಗಳ ಅತ್ಯಾಚಾರ, ಕೊಲೆ ಯತ್ನ ➤ ಮೂವರ ಬಂಧನ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.12. ಮದ್ರಸಕ್ಕೆ ತೆರಳುತ್ತಿದ್ದ ಮೂವರು ವಿದ್ಯಾರ್ಥಿನಿಯರನ್ನು ಅಪಹರಿಸಿ ಅತ್ಯಾಚಾರ ಮತ್ತು ಕೊಲೆಗೆ ಯತ್ನಿಸಿದ ಆರೋಪದ ಮೇರೆಗೆ ಮೂವರು ಆರೋಪಿಗಳನ್ನು ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಕೋದಂಡರಾಮ ನೇತೃತ್ವದ ಪೊಲೀಸ್ ತಂಡ ಬಂಧಿಸಿದ ಘಟನೆ ಕೊಣಾಜೆ ಸಮೀಪದ ಮಲಾರ್ ಉಗ್ಗನಬೈಲ್ ಎಂಬಲ್ಲಿ ನಡೆದಿದೆ.

ಬಂಧಿತರನ್ನು ಪಾವೂರು ಉಗ್ಗನಬೈಲು ಸಮೀಪದ ಗುಣಪಾಲ (25), ಕಿರಣ್ ಕುಮಾರ್ (26) ಹಾಗೂ ನೀರುಮಾರ್ಗದ ಸುಭಾಷ್ (29) ಎಂದು ಗುರುತಿಸಲಾಗಿದೆ. ಆರೋಪಿಗಳು ಸೋಮವಾರ ಸಂಜೆ ಮಲಾರ್‌ನ ನೂರುಲ್ ಇಸ್ಲಾಮ್ ಮದ್ರಸಕ್ಕೆ ನಡೆದುಕೊಂಡು ಹೋಗುತ್ತಿದ್ದ ಮೂವರು ಬಾಲಕಿಯರನ್ನು ನಿರ್ಜನ ಪ್ರದೇಶದಲ್ಲಿ ತಡೆದು ನಿಲ್ಲಿಸಿ ಅತ್ಯಾಚಾರ ಮತ್ತು ಕೊಲೆಗೆ ಯತ್ನಿಸಿದರು ಎನ್ನಲಾಗಿದೆ. ಈ ಸಂದರ್ಭ ಅದೇ ದಾರಿಯಾಗಿ ಬರುವ ಇತರರನ್ನು ಕಂಡ ದುಷ್ಕರ್ಮಿಗಳು ಓಡಿ ಪರಾರಿಯಾಗಿದ್ದಾರೆ. ತಕ್ಷಣ ವಿದ್ಯಾರ್ಥಿಗಳು ಸ್ಥಳೀಯರ ಗಮನಕ್ಕೆ ಈ ವಿಷಯ ತಿಳಿಸಿದ್ದು, ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮಂಗಳವಾರ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಫೋಕ್ಸೋ, ಅತ್ಯಾಚಾರಕ್ಕೆ ಯತ್ನ ಹಾಗೂ ಕೊಲೆಯತ್ನ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಪುಟ್ಟ ಮಗು ➤ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯಲು ಸಿದ್ಧತೆ

error: Content is protected !!
Scroll to Top