ಶಿರ್ವ: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಬಸ್

(ನ್ಯೂಸ್ ಕಡಬ) newskadaba.com ಉಡುಪಿ, ಆ.26. ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ತಂಗುದಾಣದಲ್ಲಿದ್ದ ಅಂಗಡಿಗೆ ನುಗ್ಗಿದ ಘಟನೆ ಶನಿವಾರ ಸಂಜೆ ಉಡುಪಿ ಜಿಲ್ಲೆಯ ಶಿರ್ವದಲ್ಲಿ ನಡೆದಿದೆ.

ಬೆಳ್ಮಣ್ ನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ ಶಿರ್ವ ನಿಲ್ದಾಣಕ್ಕೆ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿರುವ ಅಂಗಡಿಗೆ ನುಗ್ಗಿದೆ. ಈ ಸಂದರ್ಭದಲ್ಲಿ ಬಸ್ ನಿಲ್ದಾಣದ ಬಳಿ ಪ್ರಯಾಣಿಕರು ಇಲ್ಲದ ಕಾರಣ ಬಹುದೊಡ್ಡ ಅನಾಹುತವೊಂದು ತಪ್ಪಿದೆ. ಅವಘಡ ನಡೆಯುವ ಸಂದರ್ಭ ಅಂಗಡಿಯ ಮಾಲಕ ಕೇಶವ ಪೈ ಅಂಗಡಿಯ ಒಳಗಿದ್ದು, ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

Also Read  что Нужно Знать об Ставках На Спорт Новичку%2C Как верно Делать Ставки начинавшим%2C Советы Чемпиона

ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರು ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top