ಕಾಸರಗೋಡು: 22 ಕೆ.ಜಿ. ಗಾಂಜಾ ಸಾಗಾಟ, ವಶ

 

ಕಾಸರಗೋಡು, ಜ 13: ಅಕ್ರಮವಾಗಿ ಬಸ್‌ನಲ್ಲಿ ಸಾಗಾಟ ಮಾಡುತ್ತಿದ್ದ ನಿಷೇಧಿತ ಗಾಂಜಾವನ್ನು ಅಬಕಾರಿ ದಳದ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಜೇಶ್ವರದಲ್ಲಿ ನಡೆದಿದೆ.

ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕರ್ನಾಟಕ ಕೆಎಸ್ಸಾರ್ಟಿಸಿ ಬಸ್‌ನ ಸೀಟಿನಡಿಯಲ್ಲಿ ಸುಮಾರು 22 ಕೆಜಿ ಗಾಂಜಾವನ್ನು ಬಚ್ಚಿಟ್ಟು ಗಾಂಜಾವನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.

ಮಂಜೇಶ್ವರ ಚೆಕ್‌ಪೋಸ್ಟ್ ಸಮೀಪ ಬಸ್ಸನ್ನು ತಡೆದು ತಪಾಸಣೆ ನಡೆಸಿದಾಗ ಓರ್ವ ವ್ಯಕ್ತಿಯು ಹಿಂಬಾಗಿಲಿನ ಮೂಲಕ ಇಳಿದು ಪರಾರಿಯಾಗಿದ್ದಾನೆ. ಆತನನ್ನು ಅಧಿಕಾರಿಗಳು ಬೆನ್ನಟ್ಟಿದರೂ ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ ಎಂದು ತಿಳಿದು ಬಂದಿದೆ.

Also Read  ಡೆಂಗ್ಯು ನಿಯಂತ್ರಣಕ್ಕೆ ಕಾರ್ಯಾಚರಣೆ ತೀವ್ರಗೊಳಿಸಲು ಸೂಚನೆ ➤ ಉಸ್ತುವಾರಿ ಕಾರ್ಯದರ್ಶಿ: ಬಿ.ಎಚ್. ಅನಿಲ್ ಕುಮಾರ್

ಗಾಂಜಾ ಹೊಂದಿದ್ದ ಬ್ಯಾಗ್‌ನಲ್ಲಿ ಚೆಂಗಳದ ನಿವಾಸಿಯೊಬ್ಬನ ಆಧಾರ್ ಕಾರ್ಡ್ ದೊರೆತಿದ್ದು, ಆತನೇ ಗಾಂಜಾ ಸಾಗಾಟ ಮಾಡಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ. ಅಬಕಾರಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

error: Content is protected !!
Scroll to Top