ಮಾರ್ಚ್ 3, 4 ರಂದು ನಿಂತಿಕಲ್ಲು ಕೆ.ಎಸ್ ಗೌಡ ವಿದ್ಯಾಸಂಸ್ಥೆಯಲ್ಲಿ ಆಧಾರ್ ಮೇಳ

(ನ್ಯೂಸ್ ಕಡಬ) newskadaba.com, ಬೆಳ್ಳಾರೆ. ಫೆ. 14. ಕೆ.ಎಸ್. ಗೌಡ ಸಮೂಹ ವಿದ್ಯಾಸಂಸ್ಥೆ ಗಳು (ರಿ) ಹಿರಿಯ ವಿದ್ಯಾರ್ಥಿ ಸಂಘ ಕೆ. ಎಸ್. ಗೌಡ ಪದವಿ ಪೂರ್ವ ಕಾಲೇಜು, ಜ್ಞಾನದೀಪ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ (ರಿ) ಬೆಳ್ಳಾರೆ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವುಗಳ ಜಂಟಿ ಆಶ್ರಯದಲ್ಲಿ ಮಾರ್ಚ್ 3 ಹಾಗೂ 4ರಂದು ಆಧಾರ್ ನೋಂದಾವಣೆ ಹಾಗೂ ತಿದ್ದುಪಡಿ ಶಿಬಿರವು ನಡೆಯಲಿರುವುದು.

ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವವರು ಮಾರ್ಚ್ 1 ನೇ ತಾರೀಖಿನಂದು ಹೆಸರು ನೋಂದಾಯಿಸಲು ಕೊನೆಯ ದಿನಾಂಕವಾಗಿದ್ದು, ನಂತರ ಬಂದ ಹೆಸರನ್ನು ಸ್ವೀಕರಿಸಲಾಗುವುದಿಲ್ಲ. ಸ್ಟಾರ್ ಟೂರ್ಸ್ & ಟ್ರಾವೆಲ್ಸ್ ನಿಂತಿಕಲ್ಲು 9880903383, ಆದಿತ್ಯ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ನಿಂತಿಕಲ್ಲು 9483746153, 8971012949, ಸಫಾ ಟೂರ್ಸ್ & ಟ್ರಾವೆಲ್ಸ್ ಬೆಳ್ಳಾರೆ 9845809491, ಜ್ಞಾನ ದೀಪ ಗ್ರಾಮೀಣ ಕಂಪ್ಯೂಟರ್ ತರಬೇತಿ ಕೇಂದ್ರ ಬೆಳ್ಳಾರೆ 9845713297 ಈ ಕಛೇರಿ ಗಳಲ್ಲಿ ಹೆಸರನ್ನು ನೋಂದಾಯಿಸಿ ಅರ್ಜಿಯನ್ನು ಪಡಕೊಳ್ಳಬಹುದು ಎಂದು ಕಾರ್ಯಕ್ರಮದ ಸಂಯೋಜಕರು ತಿಳಿಸಿದ್ದಾರೆ.

Also Read  ಮದುವೆಯ ವಿಷಯದಲ್ಲಿ ಸಮಸ್ಯೆಗಳು ಎದುರಾಗುತ್ತಿದ್ದರು ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ

error: Content is protected !!
Scroll to Top