ಶ್ರೀನಿವಾಸ ವಿಶ್ವವಿದ್ಯಾಲಯ ರಾಜ್ಯಕ್ಕೆ ಮಾದರಿ ➤ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ

ಸುರತ್ಕಲ್, ಫೆ. 14 : ರಾಜ್ಯ ಬಜೆಟ್‍ನಲ್ಲಿ ಅವಿಭಾಜ್ಯ ದಕ್ಷಿಣ ಕನ್ನಡ ಜಿಲ್ಲೆಗೆ ಅಭಿವೃದ್ಧಿ ವಿಚಾರವಾಗಿ ವಿಶೇಷ ಪ್ಯಾಕೇಜ್ ನೀಡುವ ಬಗ್ಗೆ ನಮ್ಮ ಮುಖ್ಯಮಂತ್ರಿ ಜೊತೆ ವಿಶೇಷವಾಗಿ ಚರ್ಚಿಸಲಿದ್ದೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ನುಡಿದರು

ಅವರು ಶುಕ್ರವಾರ ಮುಕ್ಕ ಶ್ರೀನಿವಾಸ ವಿಶ್ವವಿದ್ಯಾಲಯ, ಶ್ರೀನಿವಾಸ ಶಿಕ್ಷಣ ಸಮೂಹ ಸಂಸ್ಥೆಗಳು ಮತ್ತು ವಿಜಯಲಕ್ಷ್ಮಿ ಶಿಕ್ಷಣ ಸಮೂಹ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ ಹಾಗೂ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸರಕಾರಗಳು ಮಾಡುವ ಅತ್ಯತ್ತಮ ಕೆಲಸಗಳನ್ನು ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಸಿಎ. ಎ. ರಾಘವೇಂದ್ರ ರಾವ್‍ರವರು ಮಾಡುತ್ತಿರುವುದು ಅಭಿನಂದನಾರ್ಹ ವಿಚಾರ ಎಂದ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆಗಳು ನಡೆಯಬೇಕಿದೆ ಎಂದರು. ಆರೋಗ್ಯ ಮತ್ತು ಶಿಕ್ಷಣದ ವಿಷಯದಲ್ಲಿ ರಾಜ್ಯದಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಅವುಗಳನ್ನು ವ್ಯವಸ್ಥಿತವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳು ನಿಭಾಯಿಸಿಕೊಂಡು ಹೋಗುತ್ತಿವೆ. ಶ್ರೀನಿವಾಸ ವಿಶ್ವವಿದ್ಯಾಲಯವು ಮಾದರಿ ಶಿಕ್ಷಣ ಸಂಸ್ಥೆಯಾಗಿ ರೂಪುಗೊಳ್ಳಲಿ ಎಂದರು.

ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀ ಡಾ. ಸೆಲ್ವಮಣಿ ಆರ್. ಮಾತನಾಡಿ, ತನ್ನ ಕಾಲೇಜಿನ ದಿನಗಳನ್ನು ಮೆಲುಕು ಹಾಕುತ್ತಾ,  ವಿದ್ಯಾರ್ಥಿಗಳು ಮುಂದಿನ ಭವಿಷ್ಯದ ಜೀವನವನ್ನು ಯೋಜಿಯವಾಗಿ ರೂಪಿಸಿಕೊಳ್ಳಬೇಕು. ಸಿಎ ಎ. ರಾಘವೇಂದ್ರ ರಾವ್‍ರವರು ತೆಗೆದುಕೊಂಡ ದಿಟ್ಟ ನಿರ್ಧಾರಗಳು ಎಲ್ಲರಿಗೂ ಮಾದರಿಯಾಗಬೇಕು. ಸಾಮಾಜಿಕ ಜಾಲತಾಣಗಳನ್ನು ಉತ್ತಮ ಕಾರ್ಯಗಳಿಗೆ ಉಪಯೋಸಿಕೊಳ್ಳಬೇಕು. ಯುವ ಜನತೆ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಂತು ಯಶಸ್ವಿಯಾಗಿ ಸ್ವೀಕರಿಸಬೇಕು ಎಂದರು.

Also Read  ಬೆಳ್ತಂಗಡಿ :ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದತನ ಅರೇಸ್ಟ್

ಎ. ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಸಿಎ ಎ. ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳನ್ನು ಮನೆಮಕ್ಕಳಂತೆ ನೋಡಿಕೊಳ್ಳಬೇಕು. ಉದ್ಯೋಗವಕಾಶವು ಶ್ರೀನಿವಾಸ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಅರಸಿಕೊಂಡು ಬರಬೇಕು ಎನ್ನುವ ಉದ್ದೇಶದಿಂದ ಕೊಟ್ಯಾಂತರ ರೂಪಾಯಿ ವೆಚ್ಚದಲ್ಲಿ ಕೌಶಲ್ಯಾಭಿವೃದ್ಧಿ ಪ್ರಯೋಗ ಶಾಲೆಗಳನ್ನು ನಮ್ಮ ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸುತ್ತಿದ್ದೇವೆ. ಪ್ರಸಕ್ತ ವರ್ಷದಲ್ಲಿ ವಿದೇಶದ 50 ಪ್ರಖ್ಯಾತ ವಿಶ್ವವಿದ್ಯಾನಿಲಯಗಳೊಂದಿಗೆ ಒಡಂಬಡಿಕೆಗಳನ್ನು ಮಾಡಿಕೊಂಡಿದ್ದೇವೆ. ಇದರ ಮೂಲಕ ಶ್ರೀನಿವಾಸ ವಿಶ್ವವಿದ್ಯಾಲಯವು ರಾಷ್ಟ್ರದಲ್ಲಿಯೇ ಮಾದರಿ ವಿಶ್ವವಿದ್ಯಾಲಯವಾಗಿ ರೂಪುಗೊಳ್ಳಬೇಕು ಎನ್ನುವುದು ನನ್ನ ಕನಸು ಹಾಗೂ ಆಶಯ ಎಂದರು.

ವೇದಿಕೆಯಲ್ಲಿ ಪ್ರತಿಷ್ಠಾನದ ಉಪಾಧ್ಯಕ್ಷ ಹಾಗೂ ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್, ಶ್ರೀನಿವಾಸ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕಿ ವಿಜಯಲಕ್ಷ್ಮೀ ಆರ್. ರಾವ್, ಪ್ರತಿಷ್ಠಾನದ ಕಾರ್ಯದರ್ಶಿ ಮಿತ್ರಾ ಎಸ್. ರಾವ್, ಕುಲಪತಿ ಡಾ. ಪಿ. ಎಸ್. ಐತಾಳ್, ಕುಲಸಚಿವ ಡಾ. ಅನಿಲ್ ಕುಮಾರ್, ಕುಲಸಚಿವ (ಮೌಲ್ಯಮಾಪನ) ಡಾ. ಶ್ರೀನಿವಾಸ್ ಮಯ್ಯ ಡಿ., ಕುಲಸಚಿವ (ಅಭಿವೃದ್ಧಿ) ಡಾ. ಅಜಯ್, ಸಂಸ್ಥಾಪಕರ ದಿನಾಚರಣೆಯ ಸಂಯೋಜಕರು ಡಾ. ಮನೋಜ್ ವರ್ಮ, ಶ್ರೀನಿವಾಸ್ ವಿಶ್ವವಿದ್ಯಾಲಯದ ವಿವಿಧ ಕಾಲೇಜುಗಳ ಡೀನ್‍ಗಳು, ಮೆಘನಾ ಎಸ್. ರಾವ್ ಉಪಸ್ಥಿತರಿದ್ದರು.

Also Read  ಕಡಬ: ಸರಕಾರಿ ಶಾಲೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ➤ ನಲಿ-ಕಲಿ ಕೊಠಡಿಯ ಬೀಗ ಮುರಿದ ಕಳ್ಳರು

ಶ್ರೀನಿವಾಸ ವಿಶ್ವವಿದ್ಯಾಲಯ ಹಾಗೂ ಶ್ರೀನಿವಾಸ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ವರದಿಯ ಪುಸ್ತಿಕೆಗಳನ್ನು ಬಿಡುಗಡೆಗೊಳಿಸಲಾಯಿತು.

ಎ. ಶಾಮರಾವ್ ಪ್ರತಿಷ್ಠಾನವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢಶಾಲೆ ಮತ್ತು ಪದವಿ ಪೂರ್ವ ವಿಭಾಗಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಗುರುತಿಸಿ ನೀಡುವ ಎ. ಶಾಮರಾವ್ ಸ್ಮಾರಕ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗಳನ್ನು ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ಸಂಸ್ಕøತ ಶಿಕ್ಷಕ ಡಾ. ರಾಘವೇಂದ್ರ ರಾವ್ ಮತ್ತು ಮಂಗಳೂರು ವಾಮಂಜೂರಿನ ಎಸ್.ಡಿ.ಎಂ. ಮಂಗಳ ಜ್ಯೋತಿ ಪ್ರೌಢಶಾಲೆಯ ಸಂಗೀತ ಶಿಕ್ಷಕಿ ಕಸ್ತೂರಿ, ಅತ್ಯುನ್ನತ ಸಾಮಾಜಿಕ ಸೇವೆಗೆ ನೀಡಲ್ಪಡುವ ಎ. ಶಾಮರಾವ್ ಸ್ಮಾರಕ ಪ್ರಶಸ್ತಿಯನ್ನು ಸುಳ್ಯ ತಾಲೂಕಿನ ಸೇತು ಬಂಧು, ಬ್ರಿಡ್ಜ್ ಮ್ಯಾನ್ ಆಫ್ ಇಂಡಿಯಾ, ‘ಪದ್ಮಶ್ರೀ ಡಾ. ಗಿರೀಶ್ ಭಾರಧ್ವಜ್ ಅವರಿಗೆ ನೀಡಿ ಗೌರವಿಸಲಾಯಿತು. ಡಾಕ್ಟರೇಟ್ ಪಧವೀದರರಿಗೆ, ರ್ಯಾಂಕ್ ವೀಜೇತರಿಗೆ ಹಾಗೂ ಸಂಶೋಧನ ನಿರತ ಉಪನ್ಯಾಸಕರಿಗೆ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು.

error: Content is protected !!
Scroll to Top