ಕಡಬ: ರಸ್ತೆಗುರುಳಿದ ಖಾಸಗಿ ಬಸ್ ➤ 30 ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರು



(ನ್ಯೂಸ್ ಕಡಬ) newskadaba.com ಕಡಬ, ಫೆ‌.16. ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಪೇರಡ್ಕ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ‌.





ಶನಿವಾರ ರಾತ್ರಿ ಪ್ರಯಾಣಿಕರನ್ನು ತುಂಬಿಸಿ ಬೆಂಗಳೂರಿನಿಂದ ಧರ್ಮಸ್ಥಳ ಮೂಲಕ ಕುಕ್ಕೇ ಸುಬ್ರಹ್ಮಣ್ಯ ಕ್ಕೆ ಹೊರಟಿದ್ದ ಖಾಸಗಿ ಬಸ್ ಪೇರಡ್ಕ ಪೆಟ್ರೋಲ್ ಬಂಕ್ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿದೆ. ಬಸ್ಸಿನಲ್ಲಿ 35 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.






error: Content is protected !!
Scroll to Top