ಮೂರನೇ ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿ ಕೇಜ್ರಿವಾಲ್ ಪ್ರಮಾಣ ವಚನ ಸ್ವೀಕಾರ

ಹೊಸದಿಲ್ಲಿ, ಫೆ.16: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ದಿಲ್ಲಿಯ ಮುಖ್ಯಮಂತ್ರಿಯಾಗಿ ರವಿವಾರ ಪ್ರಮಾಣ ವಚನ ಸ್ವೀಕರಿಸಿದರು. ದಿಲ್ಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಪ್ರಮಾಣ ವಚನ ಬೋಧಿಸಿದರು.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜೊತೆಗೆ ಹಿಂದಿನ ಅವಧಿಯಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಮನೀಷ್ ಸಿಸೋಡಿಯಾ ಮತ್ತೆ ಉಪಮುಖ್ಯಮಂತ್ರಿಯಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು. ಅಲ್ಲದೆ ಕೈಲಾಶ್ ಗೆಹ್ಲೋಟ್, ಸತ್ಯೇಂದರ್ ಜೈನ್, ಗೋಪಾಲ್ ರಾಯ್, ಇಮ್ರಾನ್ ಹುಸೈನ್, ರಾಜೇಂದ್ರ ಪಾಲ್ ಗೌತಮ್ ಕೇಜ್ರಿವಾಲ್ ಸರಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Also Read  ಸೇನಾ ಮುಖ್ಯಸ್ಥ ಸಹಿತ 14 ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ➤ 7 ಮಂದಿ ದುರ್ಮರಣ

error: Content is protected !!
Scroll to Top