ಕಡಬ: ವಿಜೃಂಭಣೆಯಿಂದ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ ► ಕಡಬದಿಂದ ಹೊಸ್ಮಠ ವರೆಗೆ ಮೆರವಣಿಗೆಯಲ್ಲಿ ಸಾಗಿ ವಿಸರ್ಜನೆ

(ನ್ಯೂಸ್ ಕಡಬ) newskadaba.com ಕಡಬ, ಆ.27. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 44 ನೇ ವರ್ಷದ ಕಡಬ ಸಾರ್ವಜನಿಕ ಶ್ರೀ ಗಣೇಶೋತ್ಸವವು ಆ.25 ರಿಂದ 27 ರವರೆಗೆ ಬಹಳ ವಿಜೃಂಭಣೆಯಿಂದ ನಡೆಯಿತು.

ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಆಗಸ್ಟ್ 25 ಶುಕ್ರವಾರದಂದು ಗಣೇಶನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿ, ಆಗಸ್ಟ್ 27 ನೇ ಭಾನುವಾರ ಸಂಜೆ ಕಡಬ ಪೇಟೆಯಿಂದ ಬಹಳ ವಿಜೃಂಭಣೆಯಿಂದ ಮೆರವಣಿಗೆ ಮೂಲಕ ಹೊಸ್ಮಠ ಕ್ಕೆ ತೆರಳಿ ಸೇತುವೆಯ ಕೆಳಭಾಗದಲ್ಲಿ ವಿಸರ್ಜಿಸಲಾಯಿತು. ಧಾರ್ಮಿಕ ಮುಖಂಡರು, ರಾಜಕೀಯ, ಸಾಮಾಜಿಕ ಮುಖಂಡರು ಸೇರಿದಂತೆ ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡರು.

error: Content is protected !!
Scroll to Top