ಪೊಳಲಿ: ಬಸ್ಸುಗಳೆರೆಡು ಢಿಕ್ಕಿ, 20ಕ್ಕೂ ಅಧಿಕ ಮಂದಿಗೆ ಗಾಯ

ಬಂಟ್ವಾಳ, ಫೆ.16: ಖಾಸಗಿ ಎರಡು ಬಸ್‌ಗಳು ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಈ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿ.ಸಿ.ರೋಡ್- ಪೊಳಲಿ ರಸ್ತೆಯ ಕಲ್ಪನೆ ತಿರುವಿನಲ್ಲಿ ನಡೆದಿದೆ.

ಬಿ.ಸಿ .ರೋಡ್‌ನಿಂದ ಪೊಳಲಿ ಕಡೆಗೆ ಸಂಚರಿಸುತ್ತಿದ್ದ ಸರ್ವೀಸ್ ಬಸ್‌ಗೆ ಮದುವೆ ದಿಬ್ಬಣದ ಬಸ್ ಹಿಂದಿನಿಂದ ಢಿಕ್ಕಿ ಹೊಡೆದಿದೆನ್ನಲಾಗಿದೆ. ಇದರಿಂದ ಎರಡು ಬಸ್‌ಗಳನಲ್ಲಿದ್ದ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ನೂರಾರು ಜನರು ಸೇರಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.
ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Scroll to Top