ದೆಹಲಿ ಎನ್ ಕೌಂಟರ್ ಗೆ ಇಬ್ಬರು ಬಲಿ

(ನ್ಯೂಸ್ ಕಡಬ) newskadaba.com, ಹೊಸದಿಲ್ಲಿ. ಫೆ.17. ಇಂದು ಬೆಳ್ಳಂಬೆಳಗ್ಗೆ ಸುಮಾರು 5 ಗಂಟೆ ವೇಳೆ ದೆಹಲಿಯ ಪ್ರಹ್ಲಾದ್ ಪುರ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಪೊಲೀಸರು ಇಬ್ಬರು ಕ್ರಿಮಿನಲ್ ಗಳನ್ನು ಹೊಡೆದುರುಳಿಸಿದ್ದಾರೆ. ಹತ್ಯೆಯಾದವರನ್ನು ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಎಂದು ಗುರುತಿಸಲಾಗಿದೆ.

ಈ ಇಬ್ಬರು ಆರೋಪಿಗಳು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವರು ಎನ್ನಲಾಗಿದ್ದು, ಹಾಗೂ ಇತ್ತೀಚೆಗೆ ದಿಲ್ಲಿಯ ಕರವಾಲ್ ನಗರದಲ್ಲಿ ನಡೆದ ಕೊಲೆ ಪ್ರಕರಣದಲ್ಲೂ ಈ ಆರೋಪಿಗಳು ಭಾಗಿಯಾಗಿದ್ದರು ಎನ್ನಲಾಗಿದೆ. ಈ ವರದಿಯ ಪ್ರಕಾರ ಪೊಲೀಸರು ಮತ್ತು ಆರೋಪಿಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎರಡೂ ಕಡೆಗಳಿಂದ ಸುಮಾರು 30 ಸುತ್ತು ಗುಂಡಿನ ದಾಳಿಯಾಗಿದೆ ಎನ್ನಲಾಗಿದೆ.

Also Read  ಗೃಹಸಚಿವ ನಿವಾಸಕ್ಕೆಮುತ್ತಿಗೆ ಹಾಕಿದ ಯುವಮೋರ್ಚಾ ಕಾರ್ಯಕರ್ತರು

 

error: Content is protected !!
Scroll to Top