ವರದಕ್ಷಿಣೆ ಕಿರುಕುಳದ ಆರೋಪ: ಅತ್ಯಹತ್ಯೆಗೆ ಶರಣಾದ ಹಿನ್ನೆಲೆ ಗಾಯಕಿ

ಬೆಂಗಳೂರು, ಫೆ.17: ಹಿನ್ನೆಲೆ ಗಾಯಕಿ ಸುಷ್ಮಿತಾ ರಾಜೇ ತಮ್ಮ ತಾಯಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ವರದಕ್ಷಿಣೆ ಕಿರುಕುಳದ ಆರೋಪ ಕೇಳಿಬರುತ್ತಿದೆ. ಶರತ್ ಎಂಬುವರನ್ನು ಪ್ರೀತಿಸಿದ್ದ ಸುಶ್ಮಿತಾ ರಾಜೇ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದರು. ಇನ್ನು ಗಂಡ ಹಾಗೂ ಆತನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ಮಾಳಗಾಳದ ತಾಯಿ ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸಾವಿಗೂ ಮುನ್ನ ಸುಷ್ಮಿತಾ ಡೆತ್ ನೋಟು ಬರೆದು ಅದನ್ನು ವಾಟ್ಸ್‌ಆ್ಯಪ್ ಮೂಲಕ ಸಹೋದರನಿಗೆ ಕಳುಹಿಸಿದ್ದು ಈ ಸಂದೇಶ ಸದ್ಯ ವೈರಲ್ ಆಗಿದೆ. ಅಮ್ಮ ನನ್ನನ್ನು ಕ್ಷಮಿಸು. ನಾನೇ ಮಾಡಿಕೊಂಡ ತಪ್ಪಿಗೆ ನಾನೇ ಶಿಕ್ಷೆ ಅನುಭವಿಸುತ್ತಿದ್ದೇನೆ. ನನ್ನನ್ನು ದಯವಿಟ್ಟು ಕ್ಷಮಿಸು. ನನಗೆ ಅವರ ದೊಡ್ಡಮ್ಮನ ಮಾತು ಕೇಳಿಕೊಂಡು ಚಿತ್ರ ಹಿಂಸೆ ಕೊಡುತ್ತಿದ್ದರು.ಮಾತೆತ್ತಿದ್ರೆ ಮನೆ ಬಿಟ್ಟು ಹೋಗು ಅಂತಿದ್ರು. ನನಗೆ ಮಾನಸಿಕವಾಗಿ ತುಂಬಾ ಹಿಂಸೆ ಆಗುತ್ತಿತ್ತು. ಅವರನ್ನು ಮಾತ್ರ ಸುಮ್ಮನೇ ಬಿಡಬೇಡ. ನನ್ನ ಸಾವಿಗೆ ಶರತ್ ವೈದೇಹಿ, ಗೀತಾ ನೇರವಾಗಿ ಕಾರಣರಾಗಿರುತ್ತಾರೆ. ಎಷ್ಟು ಬೇಡಿಕೊಂಡು ಕಾಲು ಹಿಡಿದ್ರು ಅವನ ಮನಸ್ಸು ಕರಗಲಿಲ್ಲ. ಅವರ ಮನೆಯಲ್ಲಿ ನನಗೆ ಸಾಯಲು ಇಷ್ಟವಿರಲಿಲ್ಲ ಎಂದಿದ್ದಾರೆ. ಮದುವೆಯಾದಾಗಿನಿಂದ ಇದೆ ರೀತಿ ಹಿಂಸೆ ಅಮ್ಮ. ಯಾರ ಹತ್ತಿರಾನು ಹೇಳಿಕೊಂಡಿರಲಿಲ್ಲ. ನನ್ನನ್ನು ನಮ್ಮ ಊರಿನಲ್ಲಿ ಮಣ್ಣು ಮಾಡಿ. ಅಥವಾ ಸುಡುವ ಕಾರ್ಯವನ್ನು ನನ್ನ ತಮ್ಮನೇ ಮಾಡಲಿ. ಅವರನ್ನು ಮಾತ್ರ ಸುಮ್ಮನೆ ಬಿಡಬೇಡ. ಇಲ್ಲವಾದ್ರೇ, ನನ್ನ ಆತ್ಮಕ್ಕೆ ಶಾಂತಿ ದೊರೆಯುವುದಿಲ್ಲ. ಅಮ್ಮ ಮಿಸ್ ಯು. ನಿನಗೋಸ್ಕರ ನನ್ನ ತಮ್ಮ ಸಚಿನ್ ಇದ್ದಾನೆ. ಅವನನ್ನು ಚೆನ್ನಾಗಿ ನೋಡಿಕೋ. ಮತ್ತೊಮ್ಮೆ ಕ್ಷಮೆ ಯಾಚಿಸುತ್ತೇನೆ.

Also Read  ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ➤ ಹವಾಮಾನ ಇಲಾಖೆಯಿಂದ `ಯೆಲ್ಲೊ' ಅಲರ್ಟ್ ಘೋಷಣೆ

error: Content is protected !!
Scroll to Top