(ನ್ಯೂಸ್ ಕಡಬ) newskadaba.com, ಸುರತ್ಕಲ್. ಫೆ.18. ಶ್ರೀನಿವಾಸ ವಿಶ್ವವಿದ್ಯಾಲಯ, ಶ್ರೀನಿವಾಸ ಶಿಕ್ಷಣ ಸಮೂಹ ಸಂಸ್ಥೆಗಳು ಮತ್ತು ವಿಜಯಲಕ್ಷ್ಮಿ ಶಿಕ್ಷಣ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳ ಪ್ರತಿಭಾ ದಿನಾಚರಣೆಯ ಸಮಾರೋಪ ಸಮಾರಂಭವು ಮುಕ್ಕದ ಶ್ರೀನಿವಾಸ ನಗರದಲ್ಲಿರುವ ಶ್ರೀನಿವಾಸ ಯೂನಿವರ್ಸಿಟಿ ಕ್ಯಾಂಪಸ್‍ನಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯಅತಿಥಿಯಾಗಿ ಆಗಮಿಸಿದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕಾಲೇಜು ದಿನಗಳಲ್ಲಿ ನಾನು ಸಂಗೀತ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾಗ ನನಗೆ ತೃತೀಯ ಸ್ಥಾನ ಗಳಿಸಿತ್ತು. ಈ ತೃತೀಯ ಸ್ಥಾನವು ನನಗಿಂದು ಈ ಸ್ಥಾನಕ್ಕೆ ಬರಲು ಸ್ಪೂರ್ತಿಯಾಗಿದೆ. ನಮ್ಮೊಳಗಿನ ಕಲೆಯನ್ನು ನಾವು ಹೊರಹಾಕಲು ಪ್ರಯತ್ನಿಸಿದಾಗ ಅವುಗಳಿಂದಲೇ ನಮ್ಮ ವೃತ್ತಿಪರ ಜೀವನವನ್ನು ಮುಂದುವರಿಸಲು ಸಾಧ್ಯವಾಗುತ್ತದೆ ಎಂದರು. ಎ. ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಸಿ ಎ. ರಾಘವೇಂದ್ರ ರಾವ್ ಮಾತನಾಡಿ, ಮುಂದಿನ ದಿನಗಳಲ್ಲಿ ನಮ್ಮ ವಿಶ್ವವಿದ್ಯಾನಿಯದಲ್ಲಿ ಯೋಗ, ಸಂಗೀತಗಳಂತಹ ಜಾಬ್ ಓರಿಯೆಂಟೇಡ್ ಕೋರ್ಸ್‍ಗಳನ್ನು ಆರಂಭಿಸಿ ವಿದ್ಯಾರ್ಥಿಗಳು ಅವುಗಳ ಉಪಯೋಗವನ್ನು ಪಡೆಯಲು ಸಹಕಾರಿಯಾಗಲಿವೆ ಎಂದರು. ಈ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳ ವಿಜೇತ ತಂಡಗಳಿಗೆ ಬಹುಮಾನವನ್ನು ಮುಖ್ಯ ಅತಿಥಿಗಳಿಂದ ನೀಡಲಾಯಿತು. ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಉಪಾಧ್ಯಕ್ಷ ಹಾಗೂ ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ್‍ರಾವ್, ಶ್ರೀನಿವಾಸ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕಿ ವಿಜಯಲಕ್ಷ್ಮೀ ಆರ್. ರಾವ್, ಪ್ರತಿಷ್ಠಾನದ ಕಾರ್ಯದರ್ಶಿ ಮಿತ್ರಾ ಎಸ್. ರಾವ್, ಕುಲಪತಿ ಡಾ. ಪಿ. ಎಸ್. ಐತಾಳ್, ಕುಲಸಚಿವ ಡಾ. ಅನಿಲ್ ಕುಮಾರ್, ಕುಲಸಚಿವ (ಮೌಲ್ಯಮಾಪನ) ಡಾ. ಶ್ರೀನಿವಾಸ್ ಮಯ್ಯ ಡಿ., ಕುಲಸಚಿವ (ಅಭಿವೃದ್ಧಿ) ಡಾ. ಅಜಯ್, ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ನಡೀನ್ ಡಾ. ಮನೋಜ್ ವರ್ಮ ಉಪಸ್ಥಿತರಿದ್ದರು. ಈ ಸಂದರ್ಭ ಸಂಗೀತ ನಿರ್ದೇಶಕ ಗುರುಕಿರಣ್ ತಮ್ಮ ಹಾಡಿನ ಮೂಲಕ ವಿದ್ಯಾರ್ಥಿಗಳನ್ನು ಮನರಂಜಿಸಿದರು.