ದನದ ಹಟ್ಟಿಯ ಗೋಡೆ ಕುಸಿದು ಬಿದ್ದು ವ್ಯಕ್ತಿ ದುರ್ಮರಣ

(ನ್ಯೂಸ್ ಕಡಬ) newskadaba.com, ವೇಣೂರು, ಫೆ.18. ದನದ ಹಟ್ಟಿಯ ಗೋಡೆಯು ಕುಸಿದು ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸೋಮವಾರದಂದು ಬೆಳ್ತಂಗಡಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಬಡಕೋಡಿ ಗ್ರಾಮದ ಕಿಂರ್ಬಿ ನಿವಾಸಿ ರುಕ್ಮಯ್ಯ ಮೂಲ್ಯ ಎಂದು ಗುರುತಿಸಲಾಗಿದೆ. ಅವರು ತನ್ನ ಮನೆಯ ಹಿಂಬದಿಯಲ್ಲಿರುವ ಹಟ್ಟಿಯಿಂದ ದನವನ್ನು ಹೊರಗೆ ತರುತ್ತಿರುವಾಗ ಹಳೆಯದಾದ ಹಟ್ಟಿಯ ಗೋಡೆಯು ಆಕಸ್ಮಿಕವಾಗಿ ಕುಸಿದು ಮೈಮೇಲೆ ಬಿದ್ದು ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ.

Scroll to Top