ಒಂಟಿ ಮಹಿಳೆಯ ಕತ್ತು ಸೀಳಿ ಕೊಲೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಫೆ.18.  ಒಬ್ಬಂಟಿ ಮಹಿಳೆಯ ಕತ್ತು ಸೀಳಿ ಹತ್ಯೆಗೈದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಲಕ್ಷ್ಮೀಶ ನಗರದಲ್ಲಿ ನಡೆದಿದೆ. ಕೊಲೆಯಾದವರನ್ನು ಕವಿತಾ (31) ಎಂದು ಗುರುತಿಸಲಾಗಿದೆ.

ಮೃತರ ಗಂಡ ದಂತ ವೈದ್ಯರಾಗಿದ್ದು, ಕ್ಲಿನಿಕ್‍ಗೆ ಹೋದ ಸಂರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಂಜೆ ಸುಮಾರು 6.45 ರಿಂದ 8.15 ರೊಳಗೆ ಇವರ ಕೊಲೆ ಮಾಡಿರಬಹುದು ಎಂದು ಅಂದಾಜಿಸಲಾಗಿದೆ. ಸಂಜೆ 6.45ಕ್ಕೆ ಕವಿತಾ ಅವರು ಪತಿಯೊಂದಿಗೆ ಮೊಬೈಲ್ ನಲ್ಲಿ ಕೊನೆಯದಾಗಿ ಮಾತನಾಡಿದ್ದಾಳೆ.  8.15ಕ್ಕೆ ಆಕೆಯ ಸಾವಿನ ಸಂಗತಿ ತಿಳಿದು ಬಂದಿದೆ ಎನ್ನಲಾಗಿದೆ. ಕೊಲೆಗೈದ  ದುಷ್ಕರ್ಮಿಗಳು ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ದೋಚಿದ್ದು, ಮನೆಯ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆ.ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಹಾಗೂ ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

Also Read  ನಟಿ ಉಮಾಶ್ರೀ ಮನೆಯಲ್ಲಿ ಕಳವು ಪ್ರಕರಣ ➤ ಇಬ್ಬರ ಆರೋಪಿಗಳ ಅರೆಸ್ಟ್

error: Content is protected !!
Scroll to Top