ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ. ಫೆ.21, ನದಿಯಲ್ಲಿ ಈಜಲು ಹೋದ ಯುವಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.

ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವಿನ ರಂಜಿತ್ ಎಂಬ ಯುವಕ ಸುಳ್ಯ ತಾಲೂಕಿನ ಕೊಡೆಂಕಿರಿಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಹೋಗಿದ್ದು, ಅಲ್ಲಿ ಮನೆಯ ಸಮೀಪದ ನದಿಗೆ ಈಜಲು ಹೋದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

Scroll to Top