ಬಸ್ ಕಾಯುತ್ತಿದ್ದವರಿಗೆ ಬೈಕ್ ಢಿಕ್ಕಿ: ಮೂವರು ಮೃತ್ಯು

ಮೈಸೂರು, ಫೆ.22: ಬಸ್‌ಗಾಗಿ ಕಾದು ನಿಂತಿದ್ದವರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ದ್ವಿಚಕ್ರ ವಾಹನ ಸವಾರ ಸೇರಿದಂತೆ ಮತ್ತೊಬ್ಬ ಪ್ರಯಾಣಿಕ ಗಾಯಗೊಂಡಿರುವ ಘಟನೆ ನರಸಿಂಹಪುರ ತಾಲೂಕಿನ ಮೂಗೂರು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ತಾಲೂಕಿನ ಕರೋಹಟ್ಟಿ ಗ್ರಾಮದ ಬಸವರಾಜು ಅಲಿಯಾಸ್ ಬಸವಣ್ಣ, ಮೂಗೂರು ಹೊಸಳ್ಳಿ ಗ್ರಾಮದ ಚಿಕ್ಕಮ್ಮ ಹಾಗೂ ಚಾಮರಾಜನಗರ ತಾಲೂಕು ಉಮ್ಮತ್ತೂರು ಗ್ರಾಮದ ಗೋವಿಂದಶೆಟ್ಟಿ ಎಂದು ತಿಳಿದು ಬಂದಿದೆ.

ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹದೇವಶೆಟ್ಟಿ ಹಾಗೂ ಢಿಕ್ಕಿ ಹೊಡೆದ ಬೈಕ್ ಸವಾರ ಕೇರಳ ಮೂಲದ ಸಲ್ಮಾನ್ ಎಂಬುವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿ.ನರಸೀಪುರ ಪೊಲೀಸರು ತಿಳಿಸಿದ್ದಾರೆ.

Also Read  ಮಂಗಳೂರು: ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ 3 ಕೋ.ರೂ. ವಂಚನೆ ➤ ದೂರು ದಾಖಲು

error: Content is protected !!
Scroll to Top