ಗಡಿಯಾರ: ಕಂಟೈನರ್ ಢಿಕ್ಕಿ ಆಟೊ ಚಾಲಕ ಸಹಿತ ಇಬ್ಬರು ಪಾರು

ವಿಟ್ಲ, ಫೆ.22: ಕಂಟೈನರ್ ಲಾರಿಯೊಂದು ಆಟೊ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಚಾಲಕ ಸಹಿತ ಇಬ್ಬರು ಪವಾಡಸದೃಶ್ಯ ರೀತಿಯಲ್ಲಿ ಪಾರಾದ ಘಟನೆ ಮಂಗಳೂರು-ಬೆಂಗಳೂರು ರಾ.ಹೆ.ಯ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಸಂಭವಿಸಿದೆ.

ಆಟೊ ರಿಕ್ಷಾ ಗಡಿಯಾರದಿಂದ ಪೇರಮೊಗೇರು ಕಡೆಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಕಂಟೈನರ್ ಲಾರಿ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯ ಬಳಿಕ ಚಾಲಕ ಕಂಟೈನರ್ ಸಹಿತವಾಗಿ ಪರಾರಿಯಾಗಲು ಯತ್ನಿಸಿದ್ದಾನೆ.

ಆದರೆ ಸಾರ್ವಜನಿಕರು ಲಾರಿಯನ್ನು ಪತ್ತೆ ಹಚ್ಚಿದ್ದಾರೆ. ಘಟನೆಯಲ್ಲಿ ಇಬ್ಬರು ಆಟೊದೊಳಗಡೆ ಇದ್ದರು. ಅವರು ಪವಾಡಸದೃಶ್ಯ ರೀತಿಯಲ್ಲಿ ಪಾರಾಗಿದ್ದಾರೆ. ಘಟನೆಯಲ್ಲಿ ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

Scroll to Top