ವೈದ್ಯಕೀಯ ಚಿಕಿತ್ಸೆ ಕೋರಿ ನಿರ್ಭಯಾ ಅಪರಾಧಿ ಸಲ್ಲಿಸಿದ ಅರ್ಜಿ ವಜಾ

ಹೊಸದಿಲ್ಲಿ, ಫೆ.22: ತಾನು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ತನಗೆ ಉತ್ತಮ ವೈದ್ಯಕೀಯ ಚಿಕಿತ್ಸೆಗೆ ಅನುಮತಿ ನೀಡಬೇಕೆಂದು ಕೋರಿ ನಿರ್ಭಯಾ ಪ್ರಕರಣ ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಪಟಿಯಾಲಾ ಹೌಸ್ ಕೋರ್ಟ್ ಶನಿವಾರ ವಜಾಗೊಳಿಸಿದೆ.

ತಾನು ಮಾನಸಿಕ ಅಸ್ವಸ್ಥ, ತಲೆ ಹಾಗೂ ತೋಳಿಗೆ ಗಾಯವಾಗಿದೆ ಇದಕ್ಕೆ ಸರಿಯಾದ ಚಿಕಿತ್ಸೆ ಪಡೆಯಲು ಅನುಮತಿ ನೀಡಬೇಕೆಂದು ಕೋರಿ ಅಪರಾಧಿ ವಿನಯ್ ಶರ್ಮಾ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.

ಆದರೆ, ದಿಲ್ಲಿಯ ಪಟಿಯಾಲಾ ಹೌಸ್ ಕೋರ್ಟ್ ವಿನಯ್ ಶರ್ಮಾನ ಅರ್ಜಿಯನ್ನು ವಜಾಗೊಳಿಸಿದ್ದು, ಅಪರಾಧಿ ವಿನಯ್ ಶರ್ಮಾ ಮಾನಸಿಕವಾಗಿ ಸದೃಢನಾಗಿದ್ದಾನೆ. ಆತನಿಗೆ ಯಾವುದೇ ಆರೋಗ್ಯದ ಸಮಸ್ಯೆಯಿಲ್ಲ ಎಂಬುದಾಗಿ ತಿಹಾರ್ ಜೈಲು ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ. ನಾಲ್ವರು ಅಪರಾಧಿಗಳಿಗೆ ಸೂಕ್ತವಾದ ವೈದ್ಯಕೀಯ ನೆರವು ಕೊಡಬೇಕೆಂದು ಜೈಲು ಅಧಿಕಾರಿಗಳಿಗೆ ಸೂಚಿಸಿದೆ.

Also Read  ಕಾಸರಗೋಡು: ಅಪ್ರಾಪ್ತ ಯುವಕನಿಗೆ ಮಾದಕ ವಸ್ತು ನೀಡಿ ಕಿರುಕುಳ ಆರೋಪ ➤ ಪಂಚಾಯತ್ ಸದಸ್ಯನ ಬಂಧನ

error: Content is protected !!
Scroll to Top