ಬಸ್ ಢಿಕ್ಕಿ ಹೊಡೆದು ವಿದ್ಯಾರ್ಥಿನಿ ಮೃತ್ಯು



(ನ್ಯೂಸ್ ಕಡಬ) newskadaba.com ಕಾಸರಗೋಡು, ಫೆ.23. ಮದ್ರಸದಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬಸ್ಸು ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆಯಲ್ಲಿ ರವಿವಾರ ಬೆಳಗ್ಗೆ ನಡೆದಿದೆ.





ಮೃತಪಟ್ಟವಳನ್ನು ಅಲ್ಹಾನ್(8) ಎಂದು ಗುರುತಿಸಲಾಗಿದೆ. ಸಮೀಪದ ಮದ್ರಸದ ಎರಡನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಅಲ್ಹಾನ್ ಇಂದು ಬೆಳಗ್ಗೆ ಮದ್ರಸ ತರಗತಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ಸಂದರ್ಭ ಬಾಲಕಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದ್ದರಿಂದ ಗಂಭೀರ ಗಾಯಗೊಂಡ ಅಲ್ಹಾನ್ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಬಗ್ಗೆ ಕುಂಬಳೆ ಪೊಲೀಸರು ಪ್ರಕರಣ ದಾಖಸಿಕೊಂಡಿದ್ದಾರೆ.






error: Content is protected !!
Scroll to Top