ಹೊಸದಿಲ್ಲಿ, ಫೆ.24: ಪೌರತ್ವ ತಿದ್ದುಪಡಿ ಕಾಯ್ದೆ ಪರ ದಿಲ್ಲಿಯ ಮೌಜ್‌ಪುರ್ ಪ್ರದೇಶದಲ್ಲಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಇದರಿಂದಾಗಿ ಸ್ಥಳದಲ್ಲಿ ಘರ್ಷಣೆ ಉಂಟಾಗಿದೆ. ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಜನರನ್ನು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.
ದಿಲ್ಲಿಯ ಝಫರಾಬಾದ್ ಬಳಿ ಸಿಎಎ ವಿರೋಧಿಸಿ ಧರಣಿ ನಡೆಸಲಾಗುತ್ತಿತ್ತು. ಈ ಪ್ರದೇಶ ಹಾಗೂ ಸಿಎಎ ಪರವಾಗಿ ನಡೆಯುತ್ತಿದ್ದ ಮೆರವಣಿಗೆಯ ಪ್ರದೇಶ ಹತ್ತಿರ ಹತ್ತಿರವೇ ಇದ್ದುದರಿಂದ ಘರ್ಷಣೆ ನಡೆದಿದೆ ಎನ್ನಲಾಗಿದೆ. ಎರಡು ಗುಂಪುಗಳು ಹತ್ತಿರವೇ ಇದ್ದುದರಿಂದ ಘರ್ಷಣೆ ನಡೆದಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿತ ಮತ್ತು ಸಿಎಎ ವಿರೋಧಿಗಳ ನಡುವೆ ಕಲ್ಲು ತೂರಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರಂಭದಲ್ಲಿ ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರಿಗೆ ಪರಿಸ್ಥಿತಿ ನಿಯಂತ್ರಿಸಲು ವಿಫಲರಾದರು. ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸಪಟ್ಟಿದ್ದಾರೆ. ಬಳಿಕ ಪೊಲೀಸರು ಅಶ್ರುವಾಯು ಪ್ರಯೋಗಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಅಲ್ಲದೆ, ಈ ನಡುವೆ ದೆಹಲಿಯ ಮೆಟ್ರೋ ಸ್ಟೇಷನ್‌ಗಳನ್ನು ಬಂದ್ ಮಾಡಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.