ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಗಳಿಗೆ ಬೆಂಕಿ ►ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

(ನ್ಯೂಸ್ ಕಡಬ) newskadaba.com ಕಲಬುರಗಿ, ಆ. 28, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಗಳಿಗೆ ಬೆಂಕಿ ಹತ್ತಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ ನಡೆದಿದೆ.

ಈ ಘಟನೆ ಭಾನುವಾರ ರಾತ್ರಿ ಸಂಭವಿಸಿದ್ದು, ಬೇಕರಿ, ಮೊಬೈಲ್ ಶಾಪ್ ಸೇರಿದಂತೆ ಐದು ಅಂಗಡಿಗಳಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿ ನಷ್ಟ ಸಂಭವಿಸಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿಯನ್ನು ನಂದಿಸಿದ್ದು, ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ವರದಕ್ಷಿಣೆ ಕಿರುಕುಳ ಕೇಸ್‌: ಜೀವಾವಧಿ ಶಿಕ್ಷೆ ಪಡೆದಿದ್ದ 93 ವರ್ಷದ ಅಜ್ಜಿ ಬಿಡುಗಡೆ

error: Content is protected !!
Scroll to Top