ಭೂಗತ ಪಾತಕಿ ರವಿ ಪೂಜಾರಿ ರಾಜ್ಯ ಪೊಲೀಸ್ ವಶಕ್ಕೆ

ಬೆಂಗಳೂರು, ಫೆ.24: ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ದಕ್ಷಿಣ ಆಫ್ರಿಕಾದ ಸೆನೆಗಲ್ ನಲ್ಲಿ ಬಂಧಿತನಾಗಿದ್ದ ಭೂಗತ ಪಾತಕಿ ರವಿ ಪೂಜಾರಿಯನ್ನು ಸೋಮವಾರ ನಸುಕಿನಲ್ಲಿ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ.

ರವಿ ಪೂಜಾರಿಯನ್ನು ಎಡಿಜಿಪಿ ಅಮರ್ ಕುಮಾರ್ ಪಾಂಡೆ, ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ನೇತೃತ್ವದ ತಂಡ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ.

ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಸಂದೀಪ್ ಪಾಟೀಲ, “ರವಿ ಪೂಜಾರಿ ಅಪರಾಧ ಚಟುವಟಿಕೆ, ನಗರಕ್ಕೆ ಕರೆದುಕೊಂಡ ಬಂದಿರುವ ಕುರಿತಾಗಿ ಹೆಚ್ಚಿನ‌ ಮಾಹಿತಿಯನ್ನು ಸೋಮವಾರ ಬೆಳಗ್ಗೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

1990ರಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ರವಿಪೂಜಾರಿ ರಾಜ್ಯದಲ್ಲಿ 6೦ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದಾನೆ.

Also Read  ಶಾಲಾ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಮತ್ತು ಕಾರು ನಡುವೆ ಢಿಕ್ಕಿಯಾಗಿ ಬಸ್ ಪಲ್ಟಿ ➤ ಹಲವು ಮಕ್ಕಳಿಗೆ ಗಾಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಪ್ರಕರಣಗಳು ಪೂಜಾರಿ ವಿರುದ್ದ ದಾಖಲಾಗಿದ್ದು ಮಂಗಳೂರು ನಗರ, ಮುಲ್ಕಿ, ಮೂಡಬಿದರೆ, ಬರ್ಕೆ, ಕೋಣಾಚೆ, ಊರ್ವ, ಕಾವೂರು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ 33ಕ್ಕೂ‌ ಹೆಚ್ಚು ಪ್ರಕರಣಗಳಿವೆ. ಸುಮಾರು ಒಂದು ವರ್ಷದಿಂದ ರಾಜ್ಯ ಪೊಲೀಸ್ ಇಲಾಖೆ ಹಾಗೂ ಕೇಂದ್ರದ‌ ತನಿಖಾ ಸಂಸ್ಥೆಗಳು ನಿರಂತರವಾಗಿ ರವಿ ಪೂಜಾರಿಯನ್ನು ಭಾರತಕ್ಕೆ ಕರೆತರಲು ಪ್ರಯತ್ನ ನಡೆಸಿತ್ತು.

 

error: Content is protected !!
Scroll to Top