ಸಂಗೀತ ನಿದೇರ್ಶಕ ಅರ್ಜುನ್ ಜನ್ಯಗೆ ಹೃದಯಾಘಾತ: ಅಸ್ಪತ್ರೆಗೆ ದಾಖಲು

ಮೈಸೂರು, ಫೆ.27: ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹೃದಯಾಘಾತ ಸಂಭವಿಸಿ ಮೈಸೂರಿನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.

ಅರ್ಜುನ್ ಜನ್ಯರ ಮೈಸೂರಿನ ತಮ್ಮ ನಿವಾಸದಲ್ಲಿರುವಾಗ ಹೃದಯಾಘಾತಕ್ಕೊಳಗಾಗಿದ್ದಾರೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಸಮೀಪದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅರ್ಜುನ್ಯರಿಗೆ ಲಘು ಹೃದಯಾಘಾತವಾಗಿರುವ ಬಗ್ಗೆ ಆಸ್ಪತ್ರೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ತಡರಾತ್ರಿಯಿಂದಲೇ ಅರ್ಜುನ್ ಜನ್ಯ ಅವರಿಗೆ ಚಿಕಿತ್ಸೆ ಆರಂಭಿಸಿದ್ದು, ರಾತ್ರಿಯೇ ಆ್ಯಂಜಿಯೋಪ್ಲ್ಯಾಸ್ಟಿ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅರ್ಜುನ್ ಜನ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

Also Read  ಶಂಕಿತ ಕೊರೋನ ಪುತ್ತೂರಿನ ವ್ಯಕ್ತಿ ವೆನ್ಲಾಕ್ ಆಸ್ಪತ್ರೆಗೆ

error: Content is protected !!
Scroll to Top